ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಆಕ್ರೋಶ; ಬೆಂಕಿ ಹಚ್ಚಿ ಪ್ರತಿಭಟನೆ

Last Updated 20 ಆಗಸ್ಟ್ 2019, 7:17 IST
ಅಕ್ಷರ ಗಾತ್ರ

ಚಿತ್ರದುರ್ಗ: ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಆಕ್ರೋಶಗೊಂಡ ಅವರ ಬೆಂಬಲಿಗರು ಬೈಕಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿದರು.

ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಟೈರುಗಳಿಗೆ ಬೆಂಕಿ ಹಚ್ಚಲು ಮುಂದಾದರು. ಪೊಲೀಸರು ಇದನ್ನು ತಡೆಯುತ್ತಿದ್ದಂತೆ ಬೈಕಿಗೆ ಬೆಂಕಿ ಹಚ್ಚಿದ್ದಾರೆ.

ಇದರಿಂದ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿ ಬೀಸಿದರು.

ಸಚಿವ ಸ್ಥಾನ ಸಿಗದ ಹಿನ್ನೆಲೆ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅಸಮಧಾನ ವ್ಯಕ್ತಪಡಿಸಿದ್ದರು. ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಶಾಸಕರ ಗೈರು ಹಾಜರಾಗಿದ್ದರು.

'ಹಿರಿತನ, ಪಕ್ಷನಿಷ್ಠೆ ಗುರುತಿಸಿ ಮಂತ್ರಿಗಿರಿ ನೀಡದ್ದಕ್ಕೆ ಬೇಸರವಾಗಿದೆ. ಭ್ರಮನಿರಸನ ಆಗಿದೆ.

ಕೆಲ ಶಾಸಕರು ಇಂದು ಬೆಂಗಳೂರಿನಲ್ಲಿ ಸೇರಿ ಚರ್ಚಿಸುತ್ತೇವೆ. ಬಿಎಸ್ ವೈ ಮತ್ತು ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡುತ್ತೇವೆ' ಎಂದು ಮಾಧ್ಯಮದ ಎದುರು ತಿಪ್ಪಾರೆಡ್ಡಿ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT