ಚಿತ್ರದುರ್ಗ:ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನಗೊಂಡಿರುವ ರೈತ ಸಂಘದ ಕಾರ್ಯಾಧ್ಯಕ್ಷೆ ಚುಕ್ಕಿ ನಂಜುಂಡಸ್ವಾಮಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾರ್ಯಕಾರಿಣಿಯಲ್ಲಿ ಘೋಷಣೆ ಮಾಡಿದರು.

‘ಬಡಗಲಪುರ ನಾಗೇಂದ್ರ ಅವರನ್ನೇ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂಬ ಉದ್ದೇಶ ಎಲ್ಲರಿಗೂ ಇತ್ತು. ಸಭೆಗೆ ರಾಜ್ಯದ ಎಲ್ಲ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಪ್ರಧಾನಕಾರ್ಯದರ್ಶಿಗಳನ್ನು ಆಹ್ವಾನಿಸಲಾಗಿತ್ತು. ಅವರ ಅಭಿಪ್ರಾಯಗಳಿಗೆ ಇಲ್ಲಿ ಮನ್ನಣೆ ಸಿಕ್ಕಿಲ್ಲ’ ಎಂದು ಚುಕ್ಕಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಆಯ್ಕೆ ಪ್ರಕ್ರಿಯೆ ಪ್ರಜಾಸತ್ತಾತ್ಮಕವಾಗಿ ನಡೆದಿಲ್ಲ. ಇದೊಂದು ಏಕಪಕ್ಷೀಯ ನಿರ್ಧಾರ. ಹೀಗಾಗಿ, ರಾಜೀನಾಮೆಗೆ ತೀರ್ಮಾನಿಸಿದ್ದೇನೆ. ಅಧ್ಯಕ್ಷರನ್ನು ಭೇಟಿಯಾಗಿ ಲಿಖಿತ ರೂಪದಲ್ಲಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.