ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9 ಅಭ್ಯರ್ಥಿಗಳು 14 ನಾಮಪತ್ರ ಸಲ್ಲಿಕೆ

ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇನ್ನೂ ಯಾವ ನಾಮಪತ್ರವೂ ಬಂದಿಲ್ಲ
Last Updated 20 ಏಪ್ರಿಲ್ 2018, 9:09 IST
ಅಕ್ಷರ ಗಾತ್ರ

ಮಂಡ್ಯ: ನಾಮಪತ್ರ ಸಲ್ಲಿಸಲು ಎರಡನೇ ದಿನವಾದ ಗುರುವಾರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ 9 ಅಭ್ಯರ್ಥಿಗಳು 14 ನಾಮಪತ್ರಗಳನ್ನು ಸಲ್ಲಿಸಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ರವೀಂದ್ರ ಶ್ರೀಕಂಠಯ್ಯ ಅವರು 3 ನಾಮಪತ್ರ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಯಾಗಿ ಕೆ.ಉದಯ್ ಕುಮಾರ್ 1 ನಾಮಪತ್ರ ಸಲ್ಲಿಸಿದರು. ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಸುರೇಶ್‌ಗೌಡ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿ ಡಿ.ಆರ್.ಮಂಜುನಾಥ್ 3 ನಾಮಪತ್ರ ಸಲ್ಲಿಸಿದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಡಿ.ಕೆ.ರವಿಕುಮಾರ್ 1 ನಾಮಪತ್ರ ಸಲ್ಲಿಸಿದರು.

ಮಂಡ್ಯ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಂ.ಬಿ.ನಾಗಣ್ಣಗೌಡ 1 ನಾಮಪತ್ರ ಸಲ್ಲಿಸಿದರು. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪಿ.ಎಸ್‌.ಮಹೇಶ್ ಕುಮಾರ್ 1 ನಾಮಪತ್ರ ಸಲ್ಲಿಸಿದರು. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಬಿ.ಎನ್.ಲೋಕೇಶ್ 2 ನಾಮಪತ್ರ ಸಲ್ಲಿಸಿದರು.

ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT