ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜಿರೆಯಲ್ಲಿ ಸೂರ್ಯನ ಸುತ್ತ ಉಂಗುರ: ಈ ಅಪರೂಪದ ವಿದ್ಯಮಾನಕ್ಕೇನು ಕಾರಣ?  

Last Updated 2 ಅಕ್ಟೋಬರ್ 2019, 8:10 IST
ಅಕ್ಷರ ಗಾತ್ರ

ಉಜಿರೆ (ದಕ್ಷಿಣ ಕನ್ನಡ ಜಿಲ್ಲೆ):ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯಲ್ಲಿಬುಧವಾರ ಮಧ್ಯಾಹ್ನ ಆಗಸದಲ್ಲಿ ವಿಸ್ಮಯಕಾರಿ ವಿದ್ಯಮಾನವೊಂದು ಕಂಡುಬಂತು.

ಉಂಗುರದಂಥ ಆಕೃತಿಯೊಂದು ಸೂರ್ಯನ ಸುತ್ತಲೂ ಆವರಿಸಿಜನರನ್ನು ಚಕಿತರನ್ನಾಗಿಸಿತು. ಈ ಅಪರೂಪದ ವಿದ್ಯಮಾನವನ್ನು ನೋಡಿದ ಜನರುಪುಳಕಿತ ಭಾವ ಅನುಭವಿಸಿದರು.

ಮಧ್ಯಾಹ್ನ 11ಗಂಟೆ ಸುಮಾರಿಗೆ ಆರಂಭವಾದ ಈ ವಿದ್ಯಮಾನ ಸುಮಾರು 20 ನಿಮಿಷಗಳ ವರೆಗೆ ಜನರ ವೀಕ್ಷಣೆಗೆ ಸಿಕ್ಕಿದೆ. ಈ ಘಟನೆಯನ್ನು ಹಲವರು ಕ್ಯಾಮೆರಾದಲ್ಲೂ ಸೆರೆ ಹಿಡಿದಿದ್ದಾರೆ. ವಾಟ್ಸ್ಯಾಪ್‌ ಗ್ರೂಪ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರಗಳು ವೈರಲ್ ಆಗಿವೆ.

ಈ ವಿದ್ಯಮಾನಕ್ಕೆ ಕಾರಣವೇನು?

ಸೂರ್ಯನ ಸುತ್ತಲೂ ಆವರಿಸಿರುವ ಮೋಡದಲ್ಲಿ ಹುದುಗಿರುವ ಮಂಜುಗಡ್ಡೆ ಕಣಗಳ ಮೇಲೆ ಬೆಳಕು ಹರಿದ ಪರಿಣಾಮ ಆಕರ್ಷಕ ವೃತ್ತ ಗೋಚರಿಸಿದೆ. ಕಾಮನಬಿಲ್ಲು ಸೃಷ್ಟಿಯಾದಂತೆ ನಡೆದ ವಿದ್ಯಮಾನ ಇದಾಗಿದ್ದು ಬಣ್ಣಗಳಲ್ಲಿ ಮಾತ್ರ ವ್ಯತ್ಯಾಸ ಕಂಡುಬಂದಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚು ಇರುವ ಮತ್ತು ಮಳೆ ಬರುವ ಮುನ್ಸೂಚನೆಯನ್ನು ಇದು ನೀಡುತ್ತದೆ.

ಮೋಡಗಳಲ್ಲಿರುವ ಮಂಜುಗಡ್ಡೆ ಹರಳುಗಳು ಸೂರ್ಯನಿಗೆ 22 ಡಿಗ್ರಿ ಅಥವಾ ಹೆಚ್ಚಿನ ಕೋನದಲ್ಲಿ ವಕ್ರೀಭವನಕ್ಕೀಡಾಗುತ್ತವೆ. ಸೂರ್ಯನ ಸುತ್ತ ವೃತ್ತಾಕಾರವಾಗಿ ಹರಡಿಕೊಳ್ಳುತ್ತವೆ. ಈ ಹರಳುಗಳ ಮೂಲಕ ಸೂರ್ಯನ ಬೆಳಕು ಹಾದುಹೋಗುವಾಗ, ಕಿರಣವು ಕಾಮನಬಿಲ್ಲಿನ ಏಳು ಬಣ್ಣಗಳಾಗಿ ಚದುರಿ, ಆಕರ್ಷಕ ಕಾಮನಬಿಲ್ಲು ಗೋಚರಿಸುತ್ತದೆ. ಇದು ತೀರಾ ಅಪರೂಪವೇನಲ್ಲ ಎನ್ನುತ್ತಾರೆ ವಿಜ್ಞಾನಿಗಳು. ವಿಭಿನ್ನ ಸ್ಥಳಗಳಲ್ಲಿ ವಿಭಿನ್ನ ಸಮಯದಲ್ಲಿ ಇದು ಗೋಚರಿಸುತ್ತದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT