ಮಂಗಳವಾರ, ಫೆಬ್ರವರಿ 25, 2020
19 °C

ಸಿಎಎ ವಿರುದ್ಧ ನಾಟಕ ಪ್ರದರ್ಶನ ಆರೋಪ: ಬಂಧಿತ ಮಹಿಳೆಯರಿಗೆ ಜಾಮೀನು ಮಂಜೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶನ ಮಾಡಿದ್ದ ಆರೋಪದಲ್ಲಿ ಸೆರೆಯಾಗಿದ್ದ ಇಬ್ಬರು ಮಹಿಳೆಯರಿಗೆ ಜಿಲ್ಲಾ ನ್ಯಾಯಾಲಯವು ಜಾಮೀನು ನೀಡಿದೆ.  

ಕೇಂದ್ರ ಸರ್ಕಾರದ ಜಾರಿ ಮಾಡಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಕ್ಕಳು ಬೀದರ್‌ನ ಶಾಲೆಯೊಂದರಲ್ಲಿ ನಾಟಕ ಪ್ರದರ್ಶನ ಮಾಡಿದ್ದರು. ಆ ಸಂಬಂಧ ಮಕ್ಕಳ ತಾಯಿ ಮತ್ತು ಶಾಲೆಯ ಪ್ರಾಂಶುಪಾಲರನ್ನು ರಾಜದ್ರೋಹ ಪ್ರಕರಣದ ಅಡಿಯಲ್ಲಿ ಪೊಲೀಸರು ಬಂಧಿಸಿದ್ದರು. 

ಈ ಘಟನೆ ದೇಶಾದ್ಯಂತ ಸುದ್ದಿ ಮಾಡಿದ್ದು, ಆಡಳಿತಾರೂಢ ಬಿಜೆಪಿ ಸರ್ಕಾರದ ನಡೆಯ ವಿರುದ್ಧ ಹಲವು ವಿರೋಧ ಪಕ್ಷಗಳ ನಾಯಕರು ಹರಿಹಾಯ್ದಿದ್ದರು. 

ನಾಟಕ ಪ್ರದರ್ಶನ ಮಾಡಿದ ಮಕ್ಕಳನ್ನು ಠಾಣೆಗೆ ಕರೆದೊಯ್ದಿದ್ದ ಪೊಲೀಸರ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ನಡೆದಿತ್ತು. 

ಇದನ್ನೂ ಓದಿ: ವಿಶ್ಲೇಷಣೆ | ಬೀದರ್‌ನ ಶಾಹೀನ್‌ ಶಾಲೆಯ ಪ್ರಕರಣ ಅತ್ಯಂತ ಕ್ರೂರ ಮತ್ತು ಅಮಾನವೀಯ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು