ಗುರುವಾರ , ಜನವರಿ 30, 2020
19 °C

ಪೌರತ್ವ ವಿರೋಧಿ ಪ್ರತಿಭಟನೆ ತೀವ್ರ : ಮಂಗಳೂರಿನಲ್ಲಿ ಕರ್ಫ್ಯೂ ಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದಲ್ಲಿ ಉದ್ರಿಕ್ತ ವಾತಾವರಣ ಮುಂದುವರಿದಿದ್ದು, ಹಂಪನಕಟ್ಟೆ, ಬಂದರು ಸೇರಿದಂತೆ ಉಪನಗರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಮಂಗಳೂರು ಉತ್ತರ, ದಕ್ಷಿಣ, ಪೂರ್ವ, ಬರ್ಕೆ ಮತ್ತು ಉರ್ವ ಠಾಣೆ ವ್ಯಾಪ್ತಿಯಲ್ಲಿ 20 ರಂದು ಮಧ್ಯರಾತ್ರಿವರೆಗೆ ಕರ್ಫ್ಯೂ ವಿಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಮಧ್ಯೆ‌ ಪ್ರತಿಭಟನೆಗೆ ಯತ್ನ: ಲಘು ಲಾಠಿ ಪ್ರಹಾರ

ನಿಷೇಧಾಜ್ಞೆ ಮಧ್ಯೆ ಪೌರತ್ವ‌ ತಿದ್ದುಪಡಿ‌ ಕಾಯ್ದೆ ವಿರೋಧಿಸಿ‌ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕೆಲ ಸಂಘಟನೆಗಳ ಕಾರ್ಯಕರ್ತರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿಯಿಂದ ಜಿಲ್ಲಾಧಿಕಾರಿ‌ ಕಚೇರಿವರೆಗೆ ಪ್ರತಿಭಟನೆ ನಡೆಸಲು ಕೆಲವರು ಯತ್ನಿಸಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಅನುಮತಿ ಇಲ್ಲದೇ‌ ಪ್ರತಿಭಟನೆ ನಡೆಸುವಂತಿಲ್ಲ ಎಂದು ಈಗಾಗಲೇ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದು, ಏಕಾಏಕಿ ಪ್ರತಿಭಟನೆಗೆ ಯತ್ನಿಸಿದ್ದರಿಂದ ‌ಈ ಲಘು ಲಾಠಿ ಪ್ರಹಾರ ನಡೆಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು