ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿ ಹತ್ಯೆ ಭೇದಿಸಿದ ಎಸ್‌ಐಟಿಗೆ ₹ 25 ಲಕ್ಷ ಬಹುಮಾನ

Last Updated 27 ಮೇ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ₹ 25 ಲಕ್ಷ ಬಹುಮಾನ ಘೋಷಿಸಲಾಗಿದೆ.

ಆ ಬಗ್ಗೆ ಆದೇಶ ಹೊರಡಿಸಿರುವ ಗೃಹ ಇಲಾಖೆ, ‘ಜಗತ್ತಿನಾದ್ಯಂತ ತೀವ್ರ ಸಂಚಲನ ಉಂಟುಮಾಡಿದ್ದ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಎಸ್‌ಐಟಿ ತಂಡದ ಸದಸ್ಯರು, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಚಾಣಾಕ್ಷತನ ಹಾಗೂ ನಿಷ್ಠೆಯಿಂದ ಭೇದಿಸಿದ್ದಾರೆ. ತಂಡದದಲ್ಲಿದ್ದ 91 ಮಂದಿಗೆ ₹ 25 ಲಕ್ಷ ಬಹುಮಾನ ಘೋಷಿಸಲಾಗಿದೆ’ ಎಂದು ಹೇಳಿದೆ.

ನಗರದ ಹೆಚ್ಚುವರಿ ಪೊಲೀಸ್ ಕಮಿಷನರ್ ಬಿ.ಕೆ. ಸಿಂಗ್ ನೇತೃತ್ವದಲ್ಲಿ ರಚಿಸಲಾಗಿದ್ದ ತಂಡದಲ್ಲಿ ಕಾನ್‌ಸ್ಟೆಬಲ್‌ನಿಂದ ಐಪಿಎಸ್‌ವರೆಗಿನ ಅಧಿಕಾರಿಗಳು ಇದ್ದರು. ಅವರವರ ಕೆಲಸಕ್ಕೆ ತಕ್ಕಂತೆ ಬಹುಮಾನವನ್ನು ಹಂಚಿಕೆ ಮಾಡಲಾಗಿದೆ. ಆ ವಿವರವನ್ನೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT