ಸೋಮವಾರ, ನವೆಂಬರ್ 18, 2019
28 °C
ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ

ಮುಜುಗರ ತಪ್ಪಿಸಿಕೊಳ್ಳಲು ಸುಧಾಕರ್ ರಾಜೀನಾಮೆ

Published:
Updated:
Prajavani

ಚಿಕ್ಕಬಳ್ಳಾಪುರ: ರಾಜಕೀಯ ವಿರೋಧಿಗಳ ಆಕ್ಷೇಪದ ನಡುವೆಯೂ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪಡೆದುಕೊಂಡಿದ್ದ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರು ಶನಿವಾರ ದಿಢೀರ್ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು.

‘ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕದ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಮಾರ್ಗಸೂಚಿ ಪಾಲನೆಯಾಗಿಲ್ಲ. ಆದ್ದರಿಂದ ಡಾ.ಕೆ.ಸುಧಾಕರ್ ನೇಮಕ ರದ್ದುಗೊಳಿಸಬೇಕು’ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯರೆಡ್ಡಿ ಅವರು ಹೈಕೋರ್ಟ್‌ನಲ್ಲಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅಂತಿಮ ವಿಚಾರಣೆಯಲ್ಲಿ ಮುಜುಗರ ತಪ್ಪಿಸಿಕೊಳ್ಳಲು ಸುಧಾಕರ್ ಅವರು ರಾಜೀನಾಮೆ ನಿರ್ಧಾರಕ್ಕೆ ಬಂದರು ಎಂದು ಹೇಳಲಾಗುತ್ತಿದೆ.

ಸೆಪ್ಟೆಂಬರ್ 6 ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ‘ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ಡಾ.ಕೆ.ಸುಧಾಕರ್‌ ಅವರನ್ನು ನೇಮಕ ಮಾಡಿರುವುದು ನಿಯಮ ಬಾಹಿರವಾಗಿದೆ’ ಎಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಪ್ರತಿಕ್ರಿಯಿಸಿ (+)