ಸಿಎಲ್‌ಪಿ ಸಭೆ 18ರಂದು: ದಿನೇಶ್‌

7

ಸಿಎಲ್‌ಪಿ ಸಭೆ 18ರಂದು: ದಿನೇಶ್‌

Published:
Updated:

ಬೆಂಗಳೂರು: ‘ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಬೆಳಗಾವಿಯ ಸುವರ್ಣಸೌಧದಲ್ಲಿ 18ರಂದು ಬೆಳಿಗ್ಗೆ ನಡೆಯಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

‘ಪೂರ್ವನಿಗದಿತ ಕಾರ್ಯಕ್ರಮದಂತೆ ಸಿದ್ದರಾಮಯ್ಯ ವಿದೇಶಕ್ಕೆ ಹೋಗುತ್ತಿದ್ದಾರೆ. ಎರಡನೇ ವಾರದಲ್ಲಿ ಅವರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಗೊಂದಲ ಬೇಡ’ ಎಂದು ಸಮರ್ಥನೆ ನೀಡಿದರು.

‘ಅಧಿವೇಶನದಲ್ಲಿ ಪಾಲ್ಗೊಳ್ಳಲು ಯಾವುದೇ ಭೀತಿ, ಹಿಂಜರಿಕೆ ಇಲ್ಲ. ವಿರೋಧ ಪಕ್ಷವನ್ನು ಎದುರಿಸಲು ನಮ್ಮ ಪಕ್ಷದ ನಾಯಕರು ಸಮರ್ಥರಿದ್ದಾರೆ’ ಎಂದರು.

ಸಚಿವ ಸ್ಥಾನ ಆಕಾಂಕ್ಷಿ ಶಾಸಕರ ಅತೃಪ್ತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘22ರಂದು ಸಚಿವ ಸಂಪುಟ ವಿಸ್ತರಣೆ ಖಚಿತ. ಅಧಿವೇಶನದಲ್ಲಿ ಭಾಗವಹಿಸುವುದಕ್ಕೂ ಸಚಿವ ಸ್ಥಾನಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !