ಕೊಡಗಿನಲ್ಲೂ ಸಿ.ಎಂ ಗ್ರಾಮ ವಾಸ್ತವ್ಯಕ್ಕೆ ಚಿಂತನೆ?

ಮಂಗಳವಾರ, ಜೂನ್ 25, 2019
28 °C

ಕೊಡಗಿನಲ್ಲೂ ಸಿ.ಎಂ ಗ್ರಾಮ ವಾಸ್ತವ್ಯಕ್ಕೆ ಚಿಂತನೆ?

Published:
Updated:
Prajavani

ಮಡಿಕೇರಿ: ಕಳೆದ ವರ್ಷ ಭಾರೀ ಮಳೆ, ಭೂಕುಸಿತ ಹಾಗೂ ಪ್ರವಾಹದಿಂದ ತತ್ತರಿಸಿದ್ದ ಕೊಡಗಿನಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆಯೇ? ಹೀಗೊಂದು ಮಾತು ಜಿಲ್ಲೆಯಲ್ಲಿ ಕೇಳಿಬರುತ್ತಿದೆ.

ಕುಮಾರಸ್ವಾಮಿ ಅವರ 20 ತಿಂಗಳ ಜನಪ್ರಿಯ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಲು ಈ ಬಾರಿಯೂ ಮುಂದಾಗಿದ್ದು, ಮುಂದಿನ ತಿಂಗಳು ಕೊಡಗಿನ ಯಾವುದಾದರೂ ಒಂದು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎನ್ನಲಾಗಿದೆ. ಅಧಿಕೃತವಾಗಿ ಕಾರ್ಯಕ್ರಮ ನಿಗದಿ ಆಗದಿದ್ದರೂ ಇಂತಹದ್ದೊಂದು ಚರ್ಚೆಯಾಗಿದೆ.

ಮಳೆ ಹಾನಿಗೆ ರಾಜ್ಯ ಸರ್ಕಾರ ಸಾಕಷ್ಟು ಪರಿಹಾರವನ್ನೂ ಒದಗಿಸಿದೆ. ಫಲಾನುಭವಿಗಳಿಗೆ ಪರಿಹಾರದ ಹಣ ತಲುಪಿದೆಯೇ ಎಂಬುದನ್ನು ಖುದ್ದು ಪರಿಶೀಲಿಸಲು ಮುಖ್ಯಮಂತ್ರಿ ಆಲೋಚಿಸಿದ್ದಾರೆ ಎನ್ನಲಾಗಿದೆ.

ಸಂತ್ರಸ್ತರಿಗೆ ನೀಡಲಿರುವ ಮನೆಗಳಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆಯೇ ಅಥವಾ ಯಾವುದಾದರೂ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆಯೇ ಎಂಬುದು ಅಧಿಕೃತಗೊಳ್ಳಬೇಕು ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಾ.ರಾ. ಮಹೇಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಅಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !