ಗುರುವಾರ , ಅಕ್ಟೋಬರ್ 24, 2019
21 °C

ಸಿ.ಎಂ ಹೊಗಳಿದ ನಳಿನ್‌: ಮುಖ್ಯಮಂತ್ರಿ ಯಡಿಯೂರಪ್ಪ ಓಲೈಕೆ ಯತ್ನ

Published:
Updated:
Prajavani

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ನೆರೆ ಪರಿಹಾರ ಕಾರ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅಧಿಕಾರಿಗಳು ಅದ್ಭುತ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಹೇಳಿದ್ದಾರೆ.

‘ಈ ಹಿಂದಿನ ಯಾವ ಸರ್ಕಾರವೂ ಇಷ್ಟು ತ್ವರಿತವಾಗಿ ಸಂತ್ರಸ್ತರಿಗೆ ನೆರವಾಗಿಲ್ಲ. ನೆರೆ ಪರಿಹಾರದ ನಯಾ ಪೈಸೆಯೂ ದುರ್ಬಳಕೆ ಆಗಬಾರದು ಎಂಬ ಕಾರಣಕ್ಕೆ ನೇರವಾಗಿ ಸಂತ್ರಸ್ತರ ಖಾತೆಗೇ ಹಣ ಜಮಾ ಆಗುವಂತೆ ಮಾಡಿದ್ದಾರೆ’ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಕೇಂದ್ರ ಸರ್ಕಾರ ಇದೀಗ ಮಧ್ಯಂತರ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ₹ 1,200 ಕೋಟಿ ಬಿಡುಗಡೆ ಮಾಡಿದೆ. ಇದರ ಬಳಕೆ ಪ್ರಮಾಣಪತ್ರ ಬಂದ ನಂತರವಷ್ಟೇ ಕೇಂದ್ರ ಮುಂದಿನ ಕಂತಿನ ನೆರವು ಬಿಡುಗಡೆ ಮಾಡುತ್ತದೆ. ಕೇಂದ್ರ ಹಣ ಬಿಡುಗಡೆ ಮಾಡುವುದಕ್ಕೆ ಮೊದಲಾಗಿಯೇ ರಾಜ್ಯ ಸರ್ಕಾರ ₹ 3 ಸಾವಿರ ಕೋಟಿ ಬಿಡುಗಡೆ ಮಾಡಿದೆ’ ಎಂದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)