ಗುರಿ ಮೀರಿ ತೆರಿಗೆ ಸಂಗ್ರಹ: ಬೆನ್ನು ತಟ್ಟಿದ ಎಚ್‌ಡಿಕೆ

7

ಗುರಿ ಮೀರಿ ತೆರಿಗೆ ಸಂಗ್ರಹ: ಬೆನ್ನು ತಟ್ಟಿದ ಎಚ್‌ಡಿಕೆ

Published:
Updated:

ಬೆಂಗಳೂರು: ತೆರಿಗೆ ಸಂಗ್ರಹದಲ್ಲಿ ವಿವಿಧ ಇಲಾಖೆಗಳು ಗುರಿ ಮೀರಿ ಸಾಧನೆ ಮಾಡಿದ್ದು, ವಾಣಿಜ್ಯ ತೆರಿಗೆ ಇಲಾಖೆಯೊಂದೇ ₹ 28,537 ಕೋಟಿ ಸಂಗ್ರಹಿಸಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಅವರು ವಾಣಿಜ್ಯ ತೆರಿಗೆ, ಅಬಕಾರಿ, ಸಾರಿಗೆ, ನೊಂದಣಿ ಮತ್ತು ಮುದಾಂಕ ಇಲಾಖೆ ಹಾಗೂ ಗಣಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ವಾಣಿಜ್ಯ ತೆರಿಗೆ ಇಲಾಖೆ ಸೆಪ್ಟಂಬರ್‌ನಿಂದ 2019 ರ ಮಾರ್ಚ್‌ ಅವಧಿಯಲ್ಲಿ ₹38,383 ಕೋಟಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಿದೆ. ಕಳೆದ ಏಪ್ರಿಲ್‌ನಿಂದ ಆಗಸ್ಟ್‌ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ಶೇ.18.7 ರಷ್ಟು ಹೆಚ್ಚಳವಾಗಿದೆ ಎಂದರು.

ಅಬಕಾರಿ ಇಲಾಖೆ ₹ 810.45 ಕೋಟಿ, ಸಾರಿಗೆ ಇಲಾಖೆ ₹ 2377.67 ಕೋಟಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ₹ 4332 ಕೋಟಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ₹728.15 ಕೋಟಿ ತೆರಿಗೆ ಸಂಗ್ರಹ ಮಾಡಿದೆ ಎಂದರು.

ಜಿಎಸ್‌ಟಿ ಜಾರಿಯಾಗಿರುವುದರಿಂದ ಅಧಿಕಾರಿಗಳು ಪರಿಣಾಮಕಾರಿಯಾಗಿ ಪರಿಶೀಲನಾ ಕಾರ್ಯ ನಡೆಸಬೇಕು. ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಹೆಚ್ಚಿನ ಪ್ರಮಾಣದ ತೆರಿಗೆ ಸಂಗ್ರಹಕ್ಕೆ ಆಸಕ್ತಿ ವಹಿಸಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದರು.
 

 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !