ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ನಷ್ಟ ಪರಿಹಾರಕ್ಕೆ ಸಿಎಂ ಒಪ್ಪಿಗೆ: ಸಹಕಾರ ಸಚಿವ ಎಸ್.ಟಿ ಸೋಮಶೇಖರ್

Last Updated 18 ಏಪ್ರಿಲ್ 2020, 7:21 IST
ಅಕ್ಷರ ಗಾತ್ರ

ಚಿತ್ರದುರ್ಗ: ಲಾಕ್‌ಡೌನ್ ಕಾರಣಕ್ಕೆ ನಷ್ಟ ಅನುಭವಿಸಿದ ಹೂ ಮತ್ತು ತರಕಾರಿ ಬೆಳೆಗಾರರಿಗೆ ಪರಿಹಾರ ನೀಡಲು ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ, ಡಿಸಿಸಿ ಬ್ಯಾಂಕ್‌ಗೆ ಶನಿವಾರ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹೊರ ರಾಜ್ಯಗಳಿಗೆ ಹಣ್ಣು ಮತ್ತು ತರಕಾರಿಗಳನ್ನು ಸರಬರಾಜು ಮಾಡಲು ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಇಂತಹ ಲಾರಿ, ಟ್ರಕ್ಗಳನ್ನು ಪರಿಶೀಲನೆ ಮಾಡುವ ನೆಪದಲ್ಲಿ ತಡೆಯುವಂತಿಲ್ಲ ಎಂದರು.

ಕೃಷಿ ಉತ್ಪನ್ನಗಳ ಸರಬರಾಜು ಮಾಡಲು ರೈತರಿಗೆ ಹಸಿರು ಪಾಸ್ ನೀಡಲಾಗುತ್ತಿದೆ. ಇದು ದುರ್ಬಳಕೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ನಕಲಿ ಪಾಸ್ ಪತ್ತೆಯಾದರೆ ಪ್ರಕರಣ ದಾಖಲಿಸಿ ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮದ್ಯದಂಗಡಿ ತೆರೆಯುವಂತೆ ಒತ್ತಡ ಇದೆ. ಆದರೆ, ಮದ್ಯ ಮಾರಾಟದ ಸಂದರ್ಭದಲ್ಲಿ ಅಂತರ ಕಾಯ್ದುಕೊಳ್ಳಲು ಸಾಧ್ಯವಿಲ್ಲ. ಸರ್ಕಾರಕ್ಕೆ ನಷ್ಟವಾದರು ಸರಿ ಮದ್ಯದಂಗಡಿ ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಂಜಾನ್ ವೇಳೆ ಮನೆಯಲ್ಲಿಯೇ ನಮಾಜ್ ಮಾಡಲು ಸೂಚಿಸಲಾಗಿದೆ. ಸಾಮೂಹಿಕ ನಮಾಜ್ ಮಾಡದಂತೆ ಸರ್ಕಾರ ಕಟ್ಟುನಿಟ್ಟಾಗಿ ಆದೇಶಿಸಿದೆ. ತಬ್ಲಿಗಿ ಜಮಾತ್ ಗೆ ಹೋಗಿ ಬಂದವರು ಕಡ್ಡಾಯವಾಗಿ ಚಿಕಿತ್ಸೆಗೆ ಒಳಪಡಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT