ಶುಕ್ರವಾರ, ಏಪ್ರಿಲ್ 3, 2020
19 °C

ದೆಹಲಿಗೆ ಬಂದಿಳಿದ ಸಿಎಂ ಎಚ್‌ಡಿಕೆ: ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಎಎನ್‌ಐ): ಕಾಲಭೈರವೇಶ್ವರನ ದೇಗುಲ ನಿರ್ಮಾಣದ ಅಡಿಗಲ್ಲು ಕಾರ್ಯಕ್ರಮಕ್ಕೆಂದು ಅಮೆರಿಕಕ್ಕೆ ತೆರಳಿದ್ದ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ ನಡೆದ ಹಿನ್ನೆಲೆಯಲ್ಲಿ ಭಾನುವಾರ ದಿಢೀರ್‌ ಭಾರತಕ್ಕೆ ಆಗಮಿಸಿದ್ದಾರೆ. 

ಸದ್ಯ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ಅವರು ವಿಶೇಷ  ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬಹುತೇಕ ಸಂಜೆ ಹೊತ್ತಿಗೆ ಅವರು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ. 

ಸಿಎಂ ಎಚ್‌ಡಿಕೆ ದೆಹಲಿಯಿಂದ ಬೆಂಗಳೂರಿಗೆ ಏರ್‌ ಇಂಡಿಯಾ ವಿಮಾನದ ಮೂಲಕ ಆಗಮಿಸಲಿದ್ದಾರೆ ಎಂದು ಈ ಮೊದಲು ಅವರ ಕಚೇರಿ ತಿಳಿಸಿತ್ತು. ಆದರೆ, ಈಗ ವಿಶೇಷ ವಿಮಾನದ ಮೂಲಕ ಅವರು ತುರ್ತಾಗಿ ಬೆಂಗಳೂರಿಗೆ ಬರುತ್ತಿದ್ದಾರೆ.  

ಸಿಎಂ ಆಗಮನದ ನಂತರದ ಬೆಳವಣಿಗೆಗಳು ಕುತೂಹಲಕ್ಕೆ ಕಾರಣವಾಗಿವೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು