ಭಾನುವಾರ, ಮಾರ್ಚ್ 7, 2021
27 °C

ಪರಿಹಾರಕ್ಕೆ ₹5000 ಕೋಟಿ ನೆರವು ಬೇಕಿದೆ, ದಾನಿಗಳು ಸಹಕರಿಸಿ: ಯಡಿಯೂರಪ್ಪ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಪ್ರವಾಹ ಪೀಡಿತ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಕೊಡಗು, ರಾಯಚೂರು, ಯಾದಗಿರಿಯಲ್ಲಿ ಆಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ. ಸಂಕಷ್ಟಕ್ಕೆ ಸಿಲುಕಿರುವವರ ನೆರವಿಗಾಗಿ ದಾನಿಗಳು ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದರು. 

ಪ್ರವಾಹ ವೀಕ್ಷಣೆ ಬಳಿಕ ಸುದ್ದಿಗಾರರೊಂದಿ‌ಗೆ ಮಾತನಾಡಿದ ಅವರು, ‘ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸುಮಾರು 30 ಸಾವಿರ ಮನೆಗಳನ್ನು ನಿರ್ಮಾಣ ಮಾಡಬೇಕಿದೆ. ಜತೆಗೆ, ಪರಿಹಾರ ಕಾರ್ಯಗಳಿಗೆ ₹5000 ಕೋಟಿ ನೆರವಿನ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಾಚರಣೆಗೆ ಬೇಕಾದ ದೋಣಿ, ಹೆಲಿಕಾಪ್ಟರ್‌ಗಳನ್ನು ಹೆಚ್ಚಿನ ಪ್ರಮಾಣಗಳಲ್ಲಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರಿಹಾರ ಶಿಬಿರಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದರು. 

ನಾನು ಇನ್ನೂ ಮೂರು ದಿನಗಳ ಕಾಲ ಇಲ್ಲೇ ಇದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತೇನೆ ಎಂದು ತಿಳಿಸಿದರು.  

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು