ಬೆಂಗಳೂರು:ಕೋವಿಡ್–19 ಪ್ರಕರಣಗಳ ಸಂಖ್ಯೆ ಕ್ಷಿಪ್ರವಾಗಿ ಏರಿಕೆಯಾಗುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಾಜ್ಯದ ಜನತೆ ಲಾಕ್‌ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವಅವರು, ‘ವಿಶ್ವದಾದ್ಯಂತ ಕೋವಿಡ್ - 19ಸೋಂಕಿನಿಂದ ಉಂಟಾಗುತ್ತಿರುವ ಹಾನಿ ಎಲ್ಲರಿಗೂ ತಿಳಿದಿದೆ. ಪ್ರಧಾನ ಮಂತ್ರಿನರೇಂದ್ರ ಮೋದಿ ಅವರು ಜನರ ಜೀವ ರಕ್ಷಣೆಗಾಗಿ ದೇಶಾದ್ಯಂತ ಇದೇ ತಿಂಗಳ (ಏಪ್ರಿಲ್) 14ರವರೆಗೆ ಲಾಕ್‍ಡೌನ್ ಘೋಷಣೆ ಮಾಡಿದ್ದಾರೆ’

‘ನಮ್ಮ ರಾಜ್ಯದಲ್ಲಿಯೂ ಬೀದರ್, ಮೈಸೂರು, ಮಂಗಳೂರು, ಬೆಂಗಳೂರು ನಗರ, ಕಲಬುರಗಿ ಜಿಲ್ಲೆಗಳಲ್ಲಿ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆಗಣನೀಯವಾಗಿ ಹೆಚ್ಚುತ್ತಿದೆ. ಈ ವೈರಸ್ ನಿಯಂತ್ರಣಕ್ಕಾಗಿ ಗಡಿ ಪ್ರದೇಶಗಳನ್ನು ಮುಚ್ಚುವುದು, ಸಾರ್ವಜನಿಕವಾಗಿ ಹೆಚ್ಚು ಹೆಚ್ಚು ಓಡಾಡುವಂತಹ ಪ್ರದೇಶಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದು, ಧಾರ್ಮಿಕ ಸ್ಥಳಗಳಲ್ಲಿ ಜನರು ಸೇರದಂತೆ ನಿರ್ಬಂಧಿಸುವುದರ ಜೊತೆಗೆ ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ’

‘ರಾಜ್ಯದ ಜನತೆ ಲಾಕ್‌ಡೌನ್‌ನ ಹಿಂದಿನ ಆಶಯವನ್ನು ಹಾಗೂ ಲಾಕ್‌ಡೌನ್ ಉಲ್ಲಂಘನೆಯಿಂದ ದೇಶಕ್ಕೆ ಎದುರಾಗಬಹುದಾದ ಅಪಾಯವನ್ನು ಅರಿತುಕೊಂಡು ಕಟ್ಟುನಿಟ್ಟಾಗಿ ಲಾಕ್‌ಡೌನ್ ಆದೇಶ ಪಾಲಿಸಬೇಕಾಗಿದೆ’ಎಂದು ಅವರು ಹೇಳಿದ್ದಾರೆ.

‘ಪಾಶ್ಚಿಮಾತ್ಯ ದೇಶಗಳಲ್ಲಿ ಈಗಾಗಲೇ ಕೋವಿಡ್-19 ನಿಯಂತ್ರಣಕ್ಕೆ ಸಿಗದ ಸ್ಥಿತಿ ತಲುಪಿದೆ. ಪ್ರಸ್ತುತ ಮಾನ್ಯ ಪ್ರಧಾನಿಯವರು ಸೂಚಿಸಿರುವ ದೇಶವ್ಯಾಪ್ತಿ ಲಾಕ್‍ಡೌನ್ ಅವಧಿಯು ಏಪ್ರಿಲ್ 14 ರಂದು ಮುಕ್ತಾಯಗೊಳ್ಳುತ್ತಿದ್ದು, ಇದನ್ನು ವಿಸ್ತರಿಸಬೇಕೋ ಬೇಡವೋ ಎಂಬ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಆದುದರಿಂದ ಈ ಕುರಿತಂತೆ ಸಲಹೆ ಸೂಚನೆಗಳನ್ನು ನೀಡಬೇಕು’ ಎಂದುಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.