ಶನಿವಾರ, ಜೂಲೈ 4, 2020
28 °C

ಜೂನ್‌ 1ರಿಂದ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ತೆರೆಯಲು ಅವಕಾಶ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Bs Yediyurappa

ಬೆಂಗಳೂರು: ಜೂನ್‌ 1ರಿಂದ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ಜವಹರಲಾಲ್ ನೆಹರು ಪುಣ್ಯತಿಥಿ ಅಂಗವಾಗಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದರೆ, ಚರ್ಚ್ ಮತ್ತು ಮಸೀದಿಗಳಿಗೂ ಅದೇ ನೀತಿ ಅನ್ವಯ ಆಗುತ್ತದೆ ಎಂದರು.

ಇದನ್ನೂ ಓದಿ: 

ಹೋಟೆಲ್‌ ಪುನರಾರಂಭಕ್ಕೆ ಪ್ರಧಾನಿಗೆ ಪತ್ರ: ರಾಜ್ಯದಲ್ಲಿ ಹೋಟೆಲ್‌ ಆರಂಭಿಸಲು ಅನುಮತಿ ನೀಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವುದಾಗಿ ಯಡಿಯೂರಪ್ಪ ಹೇಳಿದರು. ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳನ್ನು ಪ್ರಾರಂಭಿಸಬೇಕು ಎಂಬ ಒತ್ತಡ ಬಂದಿದೆ. ಈ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದೇನೆ. ಲಾಕ್‌ಡೌನ್‌ ಸಡಿಲಗೊಳಿಸಿದ ನಂತರ ಸಾಕಷ್ಟು ಜನ ರಾಜ್ಯಕ್ಕೆ ಬರುತ್ತಿದ್ದಾರೆ. ಅವರಿಗೆ ಊಟ ಮತ್ತು ಉಪಾಹಾರಕ್ಕಾಗಿ ಹೋಟೆಲುಗಳ ಅಗತ್ಯವಿದೆ. ಕೇಂದ್ರ ಸರ್ಕಾರ ಒಪ್ಪಿಗೆಗಾಗಿ ಕಾಯುತ್ತಿದ್ದೇವೆ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು