ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಆಸ್ಪತ್ರೆಗಳ 4,500 ಹಾಸಿಗೆ ಬೇಕು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಭೆ
Last Updated 30 ಜೂನ್ 2020, 7:37 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನಲ್ಲಿ ಎರಡು ಸರ್ಕಾರಿ ಸಂಸ್ಥೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ನಗರದ 11 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 2,200 ಹಾಸಿಗೆಗಳನ್ನು ಮೀಸಲಿಡಲು ವ್ಯವಸ್ಥೆ ಮಾಡಿದ್ದರೂ, 4,500 ಹಾಸಿಗೆಗಳು ಬೇಕೇ ಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಮಂಗಳವಾರ ಇಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ ಸಭೆ ನಡೆಸಿದ ಅವರು, ಕಳೆದ ನಾಲ್ಕು ತಿಂಗಳಿಂದ 10 ವೈದ್ಯಕೀಯ ಕಾಲೇಜುಗಳು ಹೊರತು ಪಡಿಸಿ, ಇತರ ಎಲ್ಲ ಕಾಲೇಜುಗಳು ಪ್ರಯೋಗಾಲಯ ವ್ಯವಸ್ಥೆ ಮಾಡಿವೆ ಎಂದರು

'ಸರ್ಕಾರಿ ಕಾಲೇಜುಗಳಲ್ಲಿ 2,000 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4,500 ಸೇರಿದಂತೆ ಸುಮಾರು 6,500 ಹಾಸಿಗೆಗಳು ಬೆಂಗಳೂರಿನ ವೈದ್ಯಕೀಯ ಕಾಲೇಜುಗಳಲ್ಲಿಯೇ ಲಭ್ಯವಾಗುತ್ತಿವೆ. ಇದಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹಕರಿಸುಬೇಕು' ಎಂದು ಕೇಳಿಕೊಂಡರು.

'ವೈದ್ಯಕೀಯ ಕಾಲೇಜುಗಳು ಸರ್ಕಾರದೊಂದಿಗೆ ಕೈಜೋಡಿಸಿ, ಕೋವಿಡ್ ಚಿಕಿತ್ಸೆಗೆ ಸಹಕರಿಸುವ ಭರವಸೆಯನ್ನು ಮುಖ್ಯಮಂತ್ರಿ ಅವರಿಗೆ ನೀಡಿದವು. ಇದಕ್ಕೆ ಸಿದ್ಧತೆ ಮಾಡಿಕೊಳ್ಳಬೇಕಾಗಿರುವುದರಿಂದ ಹಂತ ಹಂತವಾಗಿ ವ್ಯವಸ್ಥೆ ಮಾಡುವುದಾಗಿ ತಿಳಿಸಿದವು.
.
ವಿಮಾ ಸೌಲಭ್ಯ: ಕೋವಿಡ್ ಚಿಕಿತ್ಸೆ ನೀಡುವ ಖಾಸಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಕೂಡ ವಿಮಾ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

·
ಕೋವಿಡ್ ರೋಗಿಗಳಿಗೆ ಹಾಸಿಗೆ 'ಹಂಚಿಕೆ ಕುರಿತಂತೆ ಕೇಂದ್ರೀಕೃತ ವ್ಯವಸ್ಥೆಯನ್ನು ಈಗಾಗಲೇ ಬಿಬಿಎಂಪಿಯಲ್ಲಿ ಮಾಡಲಾಗಿದ್ದು, ಎರಡು ಮೂರು ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ. ಕೋವಿಡ್ ಚಿಕಿತ್ಸೆ ನೀಡುವ ಎಲ್ಲ ಆಸ್ಪತ್ರೆಗಳನ್ನು ಈ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗುವುದು' ಎಂದು ಸ್ಪಷ್ಟಪಡಿಸಿದರು.

ಖಾಸಗಿಯವರೊಂದಿಗೆ ಸಮನ್ವಯಕ್ಕೆ ಸಮಿತಿ ರಚನೆ ಮಾಡಲಾಗುವುದು. ಇದಲ್ಲದೆ ಟೆಲಿಮೆಡಿಸಿನ್ ಮೂಲಕ ಚಿಕಿತ್ಸೆ ನೀಡಲು ಸಹ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೋವಿಡ್ ಕೇರ್ ಸೆಂಟರ್‌ಗಳಿಗೆ ಅಗತ್ಯ ಸಿಬ್ಬಂದಿ ಒದಗಿಸುವಂತೆ ಸೂಚಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT