ಶುಕ್ರವಾರ, ನವೆಂಬರ್ 15, 2019
22 °C

ವಿಡಿಯೊ ಬೆನ್ನುಬಿದ್ದ ಗುಪ್ತದಳ

Published:
Updated:

ಬೆಂಗಳೂರು: ಅನರ್ಹ ಶಾಸಕರ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ರಾಜ್ಯದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದು, ಅದರ ಮೂಲ ಪತ್ತೆ ಹಚ್ಚಲು ಗುಪ್ತದಳದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆಂದು ಗೊತ್ತಾಗಿದೆ. 

ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾದ ವಿಡಿಯೊ ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಇದನ್ನು ಚಿತ್ರೀಕರಿಸಿ ಹರಿಬಿಟ್ಟವರು ಯಾರು ಎಂಬುದನ್ನು ಪತ್ತೆ ಮಾಡುವಂತೆ ಮುಖ್ಯಮಂತ್ರಿ, ಗುಪ್ತದಳದ ಹಿರಿಯ ಅಧಿಕಾರಿಗಳಿಗೆ ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರತಿಕ್ರಿಯಿಸಿ (+)