ಶನಿವಾರ, ಆಗಸ್ಟ್ 15, 2020
27 °C
ಎಲ್ಲ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

‘ಕೆರೆ’ ಕಾಮೇಗೌಡರಿಗೆ ಸೂರಿನ ಭರವಸೆ ನೀಡಿದ ಸಿ.ಎಂ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಳವಳ್ಳಿ(ಮಂಡ್ಯ): ತಾಲ್ಲೂಕಿನ ಕುಂದೂರು ಬೆಟ್ಟದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಹಲವಾರು ಕೆರೆಗಳನ್ನು ನಿರ್ಮಿಸಿರುವ ದಾಸನದೊಡ್ಡಿ ಗ್ರಾಮದ ಕಾಮೇಗೌಡರಿಗೆ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗುರುವಾರ ಕರೆ ಮಾಡಿ ಆರೋಗ್ಯ ವಿಚಾರಿಸಿದರು.

ಕಾಮೇಗೌಡರ ಮನವಿಗೆ ಸ್ಪಂದಿಸಿದ ಯಡಿಯೂರಪ್ಪ, ಕೆರೆಗಳ ಅಭಿವೃದ್ಧಿಗೆ ₹ 25 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ.

‘ಸರ್ಕಾರವೇ ನಿವೇಶನ ನೀಡಿ, ಮನೆ ಕಟ್ಟಿಸಿಕೊಡುವುದಾಗಿ ಹಾಗೂ ಮಗನಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ ನೀಡುವುದಾಗಿ ಸಿ.ಎಂ ಆಶ್ವಾಸನೆ ನೀಡಿದರು’ ಎಂದು ಕಾಮೇಗೌಡರು ತಿಳಿಸಿದರು.

ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕಾಮೇಗೌಡರ ಸಾಧನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದರು. ಅಲ್ಲದೇ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ವಿಡಿಯೊ ಕರೆ ಮಾಡಿ ಚರ್ಚಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು