ಫಲಿತಾಂಶ ಅನಿರೀಕ್ಷಿತ, ಜನಾದೇಶ ಪಡೆದ ಮೋದಿಗೆ ಅಭಿನಂದನೆ: ಸಿಎಂ ಎಚ್ಡಿಕೆ ಟ್ವೀಟ್‌

ಗುರುವಾರ , ಜೂನ್ 27, 2019
29 °C

ಫಲಿತಾಂಶ ಅನಿರೀಕ್ಷಿತ, ಜನಾದೇಶ ಪಡೆದ ಮೋದಿಗೆ ಅಭಿನಂದನೆ: ಸಿಎಂ ಎಚ್ಡಿಕೆ ಟ್ವೀಟ್‌

Published:
Updated:

ಬೆಂಗಳೂರು: ಲೋಕಸಭೆ ಚುನಾವಾಣೆ ಫಲಿತಾಂಶವನ್ನು ಅನಿರೀಕ್ಷಿತ ಎಂದಿರುವ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಮತ್ತೊಮ್ಮೆ ಜನಾದೇಶ ಪಡೆದ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಚುನಾವಣೆ ಸೋಲಿನ ಬಳಿಕ ಅವರು ಟ್ವೀಟ್‌ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?  

ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ. ಈ ಫಲಿತಾಂಶವನ್ನು ಗೌರವಿಸುತ್ತೇನೆ ಹಾಗೂ ಮತ್ತೊಮ್ಮೆ ಜನಾದೇಶ ಪಡೆದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೂ ನನ್ನ ಶುಭಾಶಯಗಳು.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ.

ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ. ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ.

ಚುನಾವಣೆಯ ಸಂದರ್ಭದಲ್ಲಿ ಸಹಕರಿಸಿದ ಮೈತ್ರಿ ಪಕ್ಷಗಳ ಎಲ್ಲ ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !