ಗುರುವಾರ , ಫೆಬ್ರವರಿ 25, 2021
29 °C
ಅಮೆರಿಕದ ಪ್ರವಾಸದಲ್ಲಿರುವ ಎಚ್‌ಡಿಕೆ

ಕರ್ನಾಟಕದಲ್ಲಿ ಹೂಡಿಕೆಗೆ ಕುಮಾರಸ್ವಾಮಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕದಲ್ಲಿ ಉದ್ಯಮ ಸ್ಥಾಪನೆಗೆ ಉತ್ತಮ ಅವಕಾಶ ಇದ್ದು, ಸರ್ಕಾರ ಉದ್ಯಮಿಗಳಿಗೆ ಹಲವಾರು ಸೌಲಭ್ಯಗಳನ್ನು ಒದಗಿಸಿದೆ. ನೂತನ ಕೈಗಾರಿಕಾ ನೀತಿಯೂ ಉದ್ಯಮಸ್ನೇಹಿಯಾಗಿದೆ. ಜಾಗತಿಕ ಸಮುದಾಯ ಇದನ್ನು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಅಮೆರಿಕದ ಪ್ರವಾಸದಲ್ಲಿರುವ ಅವರು ಮಂಗಳವಾರ ವಾಷಿಂಗ್ಟನ್‌ ಡಿಸಿ ಸಮೀಪ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿ, ದೇಶದಲ್ಲಿ ಜಿಡಿಪಿ ಪ್ರಗತಿ ಶೇ 7.2ರಷ್ಟಿದ್ದರೆ, ಕರ್ನಾಟಕದಲ್ಲಿ ಶೇ 10ರಷ್ಟಿದೆ. ರಾಜ್ಯದಲ್ಲಿ ಕೌಶಲಾಭಿವೃದ್ಧಿಗೂ ವಿಪುಲ ಅವಕಾಶ ಇದೆ ಎಂದರು.

ಭಾರತದ ಒಟ್ಟು ಯಂತ್ರ ಬಿಡಿಭಾಗಗಳ ಉತ್ಪಾದನೆಯಲ್ಲಿ ರಾಜ್ಯದ‍ಪಾಲು ಶೇ 50ರಷ್ಟಿದೆ, ಐಟಿ ರಫ್ತು ಶೇ39ರಷ್ಟಿದೆ. ಶೇ 33ರಷ್ಟು ಬಯೊಟೆಕ್‌ ರಫ್ತು ಇದೆ. ಮೂಲಸೌಲಭ್ಯ ಅಭಿವೃದ್ಧಿಗೂ ವಿಶೇಷ ಗಮನ ಹರಿಸಲಾಗಿದೆ. ರಾಜ್ಯದಲ್ಲಿ 9 ಕಡೆ ಉತ್ಪಾದನಾ ಉದ್ದೇಶಿತ ಕ್ಲಸ್ಟರ್‌ಗಳನ್ನು ರಚಿಸಲಾಗಿದೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು