ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗೆ ಕ್ರಮ: ಸಿಎಂ ಭರವಸೆ

ಆನ್‌ಲೈನ್ ಅಭಿಯಾನಕ್ಕೆ ಪ್ರತಿಕ್ರಿಯೆ
Last Updated 8 ಜೂನ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು:‘ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.

ಉತ್ತರ ಕನ್ನಡ ಜಿಲ್ಲೆಯ ಸಮಾನ ಮನಸ್ಕ ಯುವಕರು ಆರಂಭಿಸಿರುವ ‘ಆನ್‌ಲೈನ್ ಅಭಿಯಾನ’ಕ್ಕೆ ಪ್ರತಿಕ್ರಿಯೆಯಾಗಿ ಮುಖ್ಯಮಂತ್ರಿ ಕಚೇರಿ ಈ ಟ್ವೀಟ್ ಮಾಡಿದೆ.

ಉತ್ತರ ಕನ್ನಡ ಜಿಲ್ಲೆಯ ಕರಾವಳಿ, ಮಲೆನಾಡಿನ ಗಡಿಭಾಗದಲ್ಲಿಅಪಘಾತವಾದರೆ ಅಥವಾಇನ್ಯಾವುದೇ ರೀತಿಯಲ್ಲಿ ಜೀವಕ್ಕೆ ಹಾನಿಯಾಗುವ ಪರಿಸ್ಥಿತಿಯುಂಟಾದರೆ ಸೂಕ್ತ ಚಿಕಿತ್ಸೆಗೆ ಸುಸಜ್ಜಿತ ಆಸ್ಪತ್ರೆಯಿಲ್ಲ. ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡು ಮಂಗಳೂರು, ಮಣಿಪಾಲ ಅಥವಾ ಗೋವಾಕ್ಕೆ ಹೋಗಬೇಕಾಗಿದೆ. ಇದರಿಂದ ಆಕ್ರೋಶಗೊಂಡಿರುವ ಯುವಕರು ಅಭಿಯಾನ ಆರಂಭಿಸಿದ್ದಾರೆ.

#WeNeedEmergencyHospitalInUK ಎಂಬ ಹ್ಯಾಷ್ ಟ್ಯಾಗ್ ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಬೇಡಿಕೆ ಮಂಡಿಸಲಾಗುತ್ತಿದೆ. ತಮ್ಮ ಬರಹಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಸದ ಅನಂತಕುಮಾರ ಹೆಗಡೆ, ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಮ, ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಯುವಕರು ‘ಟ್ಯಾಗ್’ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT