ಭಾನುವಾರ, ಜನವರಿ 19, 2020
28 °C

ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣ: ಸಿಎಂ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿತ್ರ ನಟ ವಿಷ್ಣುವರ್ಧನ್‌ ಸ್ಮಾರಕದ ಕಟ್ಟಡ ನಿರ್ಮಾಣಕ್ಕೆ ಇನ್ನು ಮೂರು ಅಥವಾ ನಾಲ್ಕು ದಿನಗಳಲ್ಲಿ ಅಡಿಪಾಯ ಹಾಕುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ನಟಿ ಭಾರತಿ ವಿಷ್ಣುವರ್ಧನ್‌ ಅವರು ಮುಖ್ಯಮಂತ್ರಿಯವರನ್ನು ಬುಧವಾರ ಭೇಟಿ ಮಾಡಿ ಸ್ಮಾರಕ ನಿರ್ಮಾಣದ ಸಂಬಂಧ ಚರ್ಚೆ ನಡೆಸಿದರು.

ಭಾರತಿಯವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ, ಇದೇ 30 ರೊಳಗೆ ಸ್ಮಾರಕ ನಿರ್ಮಾಣಕ್ಕೆ ಅಡಿಪಾಯ ಹಾಕುವುದರ ಜತೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿಯೂ ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು