ರೆಸಾರ್ಟ್‌ನಲ್ಲಿ ಸಿ.ಎಂ: ವಿಧಾನಸೌಧಕ್ಕೆ ಮುತ್ತಿಗೆ ಯತ್ನ

ಶುಕ್ರವಾರ, ಮೇ 24, 2019
28 °C

ರೆಸಾರ್ಟ್‌ನಲ್ಲಿ ಸಿ.ಎಂ: ವಿಧಾನಸೌಧಕ್ಕೆ ಮುತ್ತಿಗೆ ಯತ್ನ

Published:
Updated:

ಬೆಂಗಳೂರು: ‘ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಇರುವಾಗ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರೆಸಾರ್ಟ್‌ನಲ್ಲಿ ಮೋಜು ಮಾಡುತ್ತಿದ್ದಾರೆ’ ಎಂದು ಆರೋಪಿಸಿ ಶನಿವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ವಿವಿಧ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರನ್ನು ಪೊಲೀಸರು ಚಾಲುಕ್ಯ ವೃತ್ತದಲ್ಲಿ ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.

‘ಲೋಕಸಭೆ ಚುನಾವಣೆ ಮುಗಿದ ಬಳಿಕ ಅಭಿವೃದ್ಧಿ ಕೆಲಸಗಳಿಗೆ ಮುಖ್ಯಮಂತ್ರಿ ಒತ್ತು ನೀಡಬೇಕಿತ್ತು. ಆದರೆ, ಉಡುಪಿ ಹಾಗೂ ಮಡಿಕೇರಿಯ ರೆಸಾರ್ಟ್‌ಗಳಲ್ಲಿ ಮೋಜು ಮಾಡುತ್ತಿದ್ದಾರೆ. ನೈತಿಕತೆ ಇದ್ದರೆ ಅವರು ರೆಸಾರ್ಟ್ ವಾಸ್ತವ್ಯ ಅಂತ್ಯಗೊಳಿಸಬೇಕು’ ಎಂದು ಒಕ್ಕೂಟದ ಅಧ್ಯಕ್ಷ ನಾಗೇಶ್ ಆಗ್ರಹಿಸಿದರು.

‘ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿಗೂ ಜನ ಪರದಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಮಳೆ ಸುರಿದು ಜನ ಜೀವನ ಅಸ್ತವ್ಯಸ್ತವಾಗುತ್ತಿದೆ. ಸಂಕಷ್ಟ ಆಲಿಸಬೇಕಾದವರು ರೆಸಾರ್ಟ್‌ನಲ್ಲಿ ಕುಳಿತಿದ್ದಾರೆ’ ಎಂದು ಕಿಡಿಕಾಡಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 5

  Angry

Comments:

0 comments

Write the first review for this !