ಬುಧವಾರ, ಮೇ 25, 2022
22 °C

ಬರ: 13ರಂದು ಸಿ.ಎಂ ಸಂವಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಬರದಿಂದ ತತ್ತರಿಸಿದ್ದು, ವಸ್ತುಸ್ಥಿತಿ ಅರಿಯಲು ಜಿಲ್ಲಾಧಿಕಾರಿಗಳ ಜೊತೆ ಮೇ 13ರಂದು ವಿಡಿಯೋ ಸಂವಾದ ನಡೆಸಲು ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ.

ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಮೇವು ಲಭ್ಯತೆ ಮತ್ತು ಉದ್ಯೋಗ ಖಾತ್ರಿ ಯೋಜನೆಯ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ. ಅಗತ್ಯ ಪರಿಹಾರೋಪಾಯಗಳನ್ನು ಸೂಚಿಸಲಿದ್ದಾರೆ.

ಹಾಸನ, ಚಿಕ್ಕಮಗಳೂರಿಗೆ ತಂಡ: ಮುಂಗಾರು ಮುನ್ನೆಚ್ಚರಿಕೆ ವಹಿಸುವ ಕುರಿತು ಜಿಲ್ಲಾಮಟ್ಟದಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಮೇ 10ರಂದು ಹಿರಿಯ ಅಧಿಕಾರಿಗಳ ತಂಡ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು