ಬುಧವಾರ, ಜನವರಿ 22, 2020
28 °C

ಸಂಕ್ರಾಂತಿ ಬಳಿಕ ಯಡಿಯೂರಪ್ಪ ಸಂಪುಟ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸಂಕ್ರಾಂತಿಯ ಬಳಿಕವೇ ನಡೆಯುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೂತನ ಶಾಸಕರಿಗೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ಸಚಿವಾಕಾಂಕ್ಷಿ ಶಾಸಕರಿಗೆ ಈ ಮಾಹಿತಿ ನೀಡಿದರು ಎಂದು ಮೂಲಗಳು ಹೇಳಿವೆ.

‘ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ದೇಶಾದಾದ್ಯಂತ ಪ್ರತಿಭಟನೆ ನಡೆಯುತ್ತಿರುವುದೂ ಸೇರಿದಂತೆ ಹಲವು ಕಾರಣಗಳಿಗೆ ಈ ತಿಂಗಳ ಕೊನೆಯಲ್ಲಿ ದೆಹಲಿಗೆ ಬರುವಂತೆ ವರಿಷ್ಠರು ಸೂಚನೆ ನೀಡಿದ್ದಾರೆ. ವರಿಷ್ಠರ ಅನುಮತಿ ಪಡೆಯದೆ ಯಾವುದೇ ಹೆಜ್ಜೆ ಇಡುವುದಿಲ್ಲ. ಭರವಸೆ ನೀಡಿರುವಂತೆ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗುವುದು’ ಎಂದರು.

‘ಸಂಪುಟ ವಿಸ್ತರಣೆ ತಡವಾಗಿರುವುದರಿಂದ ಯಾವುದೇ ವದಂತಿಗಳಿಗೂ ಕಿವಿಗೊಡಬೇಡಿ. ನಿಜಾಂಶ ನಿಮಗೂ ಗೊತ್ತಿದೆ, ಆದ್ದರಿಂದ ತಾಳ್ಮೆಯಿಂದ ಇರಿ’ ಎಂದು ಯಡಿಯೂರಪ್ಪ ಹೇಳಿದರು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು