ಶುಕ್ರವಾರ, ಜನವರಿ 24, 2020
23 °C

ರಾಮಚಂದ್ರನ್‌ಗೆ ‘ಶ್ರೀ ಸಾಹಿತ್ಯ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನದ ವತಿಯಿಂದ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ನೀಡುವ ಈ ಸಾಲಿನ ‘ಶ್ರೀ ಸಾಹಿತ್ಯ ಪ್ರಶಸ್ತಿ’ಗೆ ವಿಮರ್ಶಕ ಸಿ.ಎನ್‌.ರಾಮಚಂದ್ರನ್ ಅವರು ಆಯ್ಕೆಯಾಗಿದ್ದಾರೆ.

ಟಿ.ಪಿ.ಅಶೋಕ, ಸುಕನ್ಯಾ ಮಾರುತಿ ಹಾಗೂ ಪ್ರೊ.ಶಿವಾಜಿ ಜೋಯಿಸ್‌ ಅವರಿದ್ದ ಆಯ್ಕೆ ಸಮಿತಿ ಸರ್ವಾನುಮತದಿಂದ ಇವರನ್ನು ಆಯ್ಕೆ ಮಾಡಿದೆ.

ಪ್ರಶಸ್ತಿ ₹1 ಲಕ್ಷ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಜನವರಿ 5ರಂದು ಬೆಳಿಗ್ಗೆ 10.30ಕ್ಕೆ ಪ್ರತಿಷ್ಠಾನದ ಬಿ.ಎಂ.ಶ್ರೀ ಕಲಾಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು