ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ ಖಚಿತ: ಜಿ. ಪರಮೇಶ್ವರ

Last Updated 17 ಅಕ್ಟೋಬರ್ 2018, 8:50 IST
ಅಕ್ಷರ ಗಾತ್ರ

ಬೆಂಗಳೂರು: ನಾಡಹಬ್ಬ ದಸರಾ ಉತ್ಸವ ಪಕ್ಷ ಮೀರಿ ನಡೆಯುತ್ತದೆ. ಈ ಉತ್ಸವದಲ್ಲಿ ಗಣ್ಯರ ಆಹ್ವಾನಿಸಲು ಜಿಲ್ಲಾ ಉಸ್ತುವಾರಿ ಸಚಿವರು ಸಮಿತಿ ಮಾಡಿಲ್ಲವೆಂಬುದು ಗಮನಕ್ಕೆ ಬಂದಿದೆ.ಆದರೆ,ಎಲ್ಲ ಗಣ್ಯರನ್ನು ಕರೆ ಹಾಗೂ ಆಹ್ವಾನ ಪತ್ರಿಕೆ ನೀಡಿ ಕರೆಯಲಾಗಿದೆ ಎಂದು ಜಿ.ಟಿ. ದೇವೇಗೌಡರು ಹೇಳಿದ್ದರು. ಸಮಿತಿ ರಚಿಸದೇ ಇರುವುದರಿಂದ ಕಾಂಗ್ರೆಸ್‌ನ ಕೆಲ ಮುಖಂಡರಲ್ಲಿ ಬೇಸರವಿದ್ದರೂ ಅದನ್ನು ಸರಿ ಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರಹೇಳಿದರು.

ಬಸ್‌‌ಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಒಮ್ಮತದಿಂದಲೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ.ಈ ಐದೂ ಕ್ಷೇತ್ರಗಳಲ್ಲೂ ಎರಡೂ ಪಕ್ಷದವರ ಬೆಂಬಲ ಇದ್ದೇ ಇರಲಿದೆ.ಬಳ್ಳಾರಿ ಹಾಗೂ ಜಮಖಂಡಿಯಲ್ಲಿ ಜೆಡಿಎಸ್‌ನ ಬೆಂಬಲ ಚೆನ್ನಾಗಿಯೇ ಇದೆ.ನಮ್ಮ ಒಮ್ಮತದ ಬಗ್ಗೆ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರ ವಿಶ್ಲೇಷಣೆ ನಮಗೆ ಬೇಕಾಗಿಲ್ಲ’ ಎಂದರು.

ಇಲ್ಲಿ ಯಾವುದೇ ವೈಯಕ್ತಿಕ ಪ್ರತಿಷ್ಠೆ ಇಲ್ಲ.ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ.ಈ ಉಪಚುನಾವಣೆಯಿಂದ ಐದು ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ನಮ್ಮ ಸಮ್ಮಿಶ್ರ ಸರಕಾರ ಇನ್ನೂ ಬಲವಾಗಲಿದೆ ಎಂಬ ಸಂದೇಶ ರವಾನಿಸಲಿದ್ದೇವೆ. ಇದರಿಂದ ಬಿಜೆಪಿಗೆ ಮುಖಭಂಗವಾಗಲಿದೆ ಎಂದರು.

ಬಳ್ಳಾರಿ ಕ್ಷೇತ್ರ ಮೀಸಲು ಕ್ಷೇತ್ರವಾದ್ದರಿಂದ ಉಗ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ.ಅದಕ್ಕಿಂತ ಮುಖ್ಯವಾಗಿ ನಮ್ಮ ಪಕ್ಷದ ಹಿರಿಯ ಮುಖಂಡರು.ಇಲ್ಲಿ ಜಾತಿವಾದ ಯಾವುದೂ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಾಸಿಕ್‌ಗೆ ರಾಜ್ಯದಿಂದ‌ 23 ಬಸ್‌
ಬೆಂಗಳೂರು:
ಭಾರತರತ್ನ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧ ಧರ್ಮ ದೀಕ್ಷೆ ಪಡೆದ ಸ್ಥಳವಾದ ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ದೀಕ್ಷಾ ಭೂಮಿಯಲ್ಲಿ ಈ ದಿನದಂದು ಪ್ರಾರ್ಥನಾ ಸಲ್ಲಿಸಲು ತೆರಳುವ ಯಾತ್ರಾರ್ಥಿಗಳಿಗೆ ರಾಜ್ಯದಿಂದ23ವಾಹನಗಳ ವ್ಯವಸ್ಥೆ ಮಾಡಲಾಗಿದ್ದು,ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಈ ವಾಹನಗಳಿಗೆ ವಿಧಾನಸೌಧ ಮುಂಭಾಗ ಹಸಿರು ನಿಶಾನೆ ತೋರಿದರು.

ಬಳಿಕ ಮಾತನಾಡಿದ ಅವರು, ‘ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರು ನಾಸಿಕ್‌ನಲ್ಲಿ ಬೌದ್ಧ ಧರ್ಮಕ್ಕೆ ದೀಕ್ಷೆ ಪಡೆದ ಈ ದಿನವನ್ನು ದೇಶದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ.ಲಕ್ಷಾಂತರ ಯಾತ್ರಾರ್ಥಿಗಳು ಈ ಪುಣ್ಯ ಭೂಮಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ನಾಸಿಕ್‌ಗೆ ತೆರಳುತ್ತಾರೆ. ಬೆಂಗಳೂರು ಹಾಗೂ ಕಲಬುರ್ಗಿಯಿಂದಲೂ ಸಾವಿರಾರು ಯಾತ್ರಾರ್ಥಿಗಳು ತೆರಳುತ್ತಾರೆ. ಇದಕ್ಕಾಗಿಒಟ್ಟು23ಐರಾವತ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.ಈ ಪೈಕಿ ಮೂರು ಬಸ್‌ಗಳು ಕಲಬುರ್ಗಿಯಿಂದ ತೆರಳಲಿವೆ’ ಎಂದರು.

ಅಂಬೇಡ್ಕರ್‌ ಅವರ ತತ್ವ ಸಿದ್ಧಾಂತಗಳನ್ನು ಇಡೀ ವಿಶ್ವವೇ ಅನುಸರಿಸುತ್ತಿದೆ.ಈ ದಿನವನ್ನು ಆಚರಿಸಲು ಒಂದು ವಾರದಲ್ಲಿಯೇ ಒಂದು ಕೋಟಿಗೂ ಹೆಚ್ಚು ಜನ ತೆರಳುವ ನಿರೀಕ್ಷೆ ಇದೆ.ಮುಂದಿನ ದಿನಗಳಲ್ಲಿ ಹಜ್‌ ಮಾದರಿಯಲ್ಲೇ ಈ ಪುಣ್ಯಸ್ಥಳವು ಪ್ರಸಿದ್ಧಿ ಪಡೆದುಕೊಳ್ಳಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT