ಭಾನುವಾರ, ನವೆಂಬರ್ 17, 2019
27 °C

ಸಿದ್ದಾರ್ಥ ನಾಪತ್ತೆ: ಹಾಸನ,ಚಿಕ್ಕಮಗಳೂರಿನ ಕಾಫಿ ಡೇ ಗ್ಲೊಬಲ್ ಲಿಮಿಟೆಡ್‌ ಬಂದ್

Published:
Updated:

ಬೆಂಗಳೂರು: ಸಿದ್ದಾರ್ಥ ನಾಪತ್ತೆ ಹಿನ್ನಲೆಯಲ್ಲಿ ಹಾಸನ ಹಾಗೂ ಚಿಕ್ಕಮಗಳೂರಿನಲ್ಲಿನ ಕಾಫಿ ಡೇ ಗ್ಲೊಬಲ್ ಲಿಮಿಟೆಡ್‌ ಘಟಕದ ಕಾರ್ಮಿಕರಿಗೆ ರಜೆ ನೀಡಲಾಗಿದೆ.

ನಗರದ ಕೆ.ಎಂ.ರಸ್ತೆಯಲ್ಲಿರುವ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಘಟಕದಲ್ಲಿ ಆತಂಕದ ವಾತಾವರಣ ಇದೆ. ಸಿಬ್ಬಂದಿಯಲ್ಲಿ ಆತಂಕ ಮಡಗಟ್ಟಿದೆ. ಘಟಕದೊಳಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66ನಲ್ಲಿ ಮಂಗಳೂರು ನಗರದಿಂದ ಉಳ್ಳಾಲ ಕಡೆಗೆ ಹೋಗುವ ಮಾರ್ಗದಲ್ಲಿರುವ ನೇತ್ರಾವತಿ ಸೇತುವೆ ಬಳಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ ಅವರು ಸೋಮವಾರ ರಾತ್ರಿ ನಾಪತ್ತೆಯಾಗಿದ್ದಾರೆ. ಪೊಲೀಸರಿಂದ ತೀವ್ರ ಶೋಧ ನಡೆಸಲಾಗುತ್ತಿದೆ.

ಪ್ರತಿಕ್ರಿಯಿಸಿ (+)