ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರವೇ ಚಂದನದಲ್ಲಿ ಪ್ರೌಢ ಶಾಲಾ ಸೇತುಬಂಧ ತರಗತಿಗಳ ಆರಂಭ: ಸುರೇಶ್ ಕುಮಾರ್

Last Updated 8 ಜುಲೈ 2020, 11:05 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 8, 9 ಮತ್ತು 10ನೇ ತರಗತಿಗಳಿಗಾಗಿ ‘ಸೇತುಬಂಧ’ (ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮಗಳ ವಿಡಿಯೊ ತರಗತಿಗಳನ್ನು ದೂರದರ್ಶನ ಚಂದನವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಈ ಸಂಬಂದ ಎಲ್ಲ ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬುಧವಾರ ಇಲಾಖೆಯ ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ-ಡಿಎಸ್‍ಇಆರ್‌ಟಿಯಲ್ಲಿ ಸೇತುಬಂಧ ಕಾರ್ಯಕ್ರಮದ ರೂಪುರೇಷೆ ಮತ್ತು ಸಿದ್ಧತೆಗಳನ್ನು ಪರಿಶೀಲಿಸಿದ ಸಚಿವರು, ಇಲಾಖೆ ಸಿದ್ಧಪಡಿಸಿದ ವಿಡಿಯೊ ತರಗತಿಗಳನ್ನು ವೀಕ್ಷಿಸಿದರು.

‘ನಮ್ಮ ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಕಲಿಕೆಯನ್ನು ನಿರಂತರವಾಗಿರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಇಂದಿನ ಸಂದರ್ಭಕ್ಕೆ ಪರಿಣಾಮಕಾರಿಯಾದ ಪರ್ಯಾಯ ಕ್ರಮಗಳಿಗೆ ಚಾಲನೆ ನೀಡಿದೆ’ಎಂದು ಅವರು ಹೇಳಿದರು.

ಒಂದು ತರಗತಿಯಿಂದ ಮತ್ತೊಂದು ತರಗತಿಗೆ ತೇರ್ಗಡೆ ಹೊಂದುವ ಮಕ್ಕಳಿಗೆ ಹಿಂದಿನ ತರಗತಿಗಳ ಕಲಿಕೆಯನ್ನು ನೆನಪಿಸಿ ಮುಂದಿನ ತರಗತಿಗಳಿಗೆ ಸಿದ್ಧಗೊಳಿಸುವ ‘ಸೇತುಬಂಧ’ ಮಕ್ಕಳ ಕಲಿಕೆಯನ್ನು ಸಮಗ್ರವಾಗಿಸುವ ನಿಟ್ಟಿನಲ್ಲಿ ಒಂದು ಪರಿಪೂರ್ಣ ಕಾರ್ಯಕ್ರಮ ಎಂದು ಅವರು ತಿಳಿಸಿದರು. ಕೆಲವೇ ದಿನಗಳಲ್ಲಿ 8ರಿಂದ 10ನೇ ತರಗತಿಯ ಸೇತುಬಂದ ವಿಡಿಯೊ ತರಗತಿಗಳು ಚಂದನ ವಾಹಿನಿಯಲ್ಲಿ ಆರಂಭಗೊಳ್ಳಲಿವೆ. ಆ ನಂತರ ಇಂಗ್ಲಿಷ್ ಮಾಧ್ಯಮಗಳಲ್ಲೂ ಈ ತರಗತಿಗಳ ಪಾಠಗಳನ್ನು ಪ್ರಾರಂಭಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಅದರಂತೆಯೇ ಶಿಕ್ಷಣ ಇಲಾಖೆಯಿಂದಲೇ ಒಂದು ಪ್ರತ್ಯೇಕ ಚಾನಲ್ ಪ್ರಾರಂಭಕ್ಕೂ ಪ್ರಯತ್ನಗಳು ನಡೆದಿವೆ. ಹಾಗೆಯೇ ರಾಜ್ಯದ ಆಯ್ದ ಸ್ಥಳಗಳಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹೊಸ ಸ್ಟುಡಿಯೋಗಳ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಅವುಗಳು ಸಹ ಪ್ರಾರಂಭವಾಗಲಿವೆ ಎಂದು ಸಚಿವರು ತಿಳಿಸಿದರು. ಈ ಮೂಲಕ ಎಲ್ಲ ತರಗತಿಗಳ ವಿದ್ಯಾರ್ಥಿಗಳ ಕಲಿಕೆ ನಿರಂತರವಾಗಿರಲಿದ್ದು, ಸಮರ್ಥ ಅನುಪಾಲನಾ ವ್ಯವಸ್ಥೆ ಸಹ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT