ಮಂಗಳವಾರ, ಮೇ 18, 2021
28 °C

ಅಲೋಕ್‌ಕುಮಾರ್ ನೂತನ ಪೊಲೀಸ್ ಕಮಿಷನರ್ ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್‌ಕುಮಾರ್ ಅವರನ್ನು ಬದಲಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಅವರ ಸ್ಥಾನಕ್ಕೆ ಸಿಸಿಬಿಯ ಹೆಚ್ಚುವರಿ ಪೊಲೀಸ್ ಕಮಿಷನರ್ ಅಲೋಕ್‌ಕುಮಾರ್‌ ಅವರನ್ನು ನೇಮಿಸುವ ಸಾಧ್ಯತೆ ಇದೆ.

ಹಿರಿಯ ಪೊಲೀಸ್ ಅಧಿಕಾರಿಗಳ ಬಡ್ತಿ ಪಟ್ಟಿ ಸಿದ್ಧವಾಗಿದ್ದು, ಸೋಮವಾರ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರದ ಮೂಲಗಳು ತಿಳಿಸಿವೆ.

‘ಅಲೋಕ್‌ಕುಮಾರ್‌ ಅವರು ಎಡಿಜಿಪಿ ಹುದ್ದೆಗೆ ಬಡ್ತಿ ಪಡೆಯುವ ಮೂಲಕ ಕಮಿಷನರ್‌ ಆಗಿ ನೇಮಕವಾಗಲಿದ್ದಾರೆ’ ಎಂದು ಮೂಲಗಳು ಹೇಳಿವೆ.

ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚುತ್ತಿದ್ದ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೇ ಆಸಕ್ತಿ ವಹಿಸಿ ಅಲೋಕ್‌ಕುಮಾರ್‌ ಅವರನ್ನು ಅಪರಾಧ ವಿಭಾಗದ ಹೆಚ್ಚುವರಿ ಕಮಿಷನರ್‌ ಆಗಿ ನೇಮಕ ಮಾಡಿದ್ದರು.

ಕಳೆದ ಡಿ. 31ರಂದೇ ಅಲೋಕ್‌ಕುಮಾರ್‌ ಸೇರಿ ಮೂವರು ಅಧಿಕಾರಿಗಳಿಗೆ ಬಡ್ತಿ ನೀಡಬೇಕಿತ್ತು. ಆದರೆ, ಖಾಲಿ ಹುದ್ದೆಗಳಿಲ್ಲದ ಕಾರಣ ಬಡ್ತಿಯನ್ನು ತಡೆ ಹಿಡಿಯಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು