ಶನಿವಾರ, ಜನವರಿ 25, 2020
19 °C

ಅಂಬರೀಷ್‌ ಸ್ಮಾರಕ ಸಮಿತಿ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಚಿತ್ರ ನಟ ಅಂಬರೀಷ್‌ ಅವರ ಸ್ಮಾರಕ ನಿರ್ಮಾಣ, ಅವರ ನೆನಪಿನಲ್ಲಿ ಕಾರ್ಯಕ್ರಮ ನಡೆಸಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ‘ಅಂಬರೀಷ್‌ ಸ್ಮಾರಕ ಪ್ರತಿಷ್ಠಾನ ಸಮಿತಿ’ ರಚಿಸಲಾಗಿದೆ.

ಡಾ.ರಾಜ್ ಕುಮಾರ್ ಮತ್ತು ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪ್ರತಿಷ್ಠಾನದಂತೆಯೇ, ಈ ಸಮಿತಿಯು ಕಾರ್ಯನಿರ್ವಹಿಸಲಿದೆ. ಪ್ರತಿಷ್ಠಾನದ ರಚನೆ, ರೂಪುರೇಷೆ, ಕಾರ್ಯಕ್ರಮ ಅನುಷ್ಠಾನದ ಪರಿಶೀಲನೆಯನ್ನು ಸಮಿತಿ ಮಾಡಲಿದೆ. ಸಮಿತಿಯಲ್ಲಿ ವಾರ್ತಾ ಇಲಾಖೆಯ ಕಾರ್ಯದರ್ಶಿ, ಆಯುಕ್ತರು ಅಥವಾ ನಿರ್ದೇಶಕರು, ಅಂಬರೀಷ್ ಪತ್ನಿ ಸಂಸದೆಯೂ ಆಗಿರುವ ಸುಮಲತಾ, ಪುತ್ರ ಅಭಿಷೇಕ್‌, ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು, ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರು ಸದಸ್ಯರಾಗಿರುತ್ತಾರೆ. ಕಂಠೀರವ ಸ್ಟುಡಿಯೋದ ವ್ಯವಸ್ಥಾಪಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು