ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕ್ಸಲ್‌ ದಾಳಿಗೆ ಬಲಿಯಾದ ಅಧಿಕಾರಿ ಕುಟುಂಬಕ್ಕೆ ಸರ್ಕಾರದಿಂದ ₹25 ಲಕ್ಷ ಪರಿಹಾರ

Last Updated 29 ಜೂನ್ 2019, 20:00 IST
ಅಕ್ಷರ ಗಾತ್ರ

ಕಲಬುರ್ಗಿ: ಛತ್ತೀಸಗಡದಲ್ಲಿ ನಕ್ಸಲ್‌ ದಾಳಿಗೆ ಬಲಿಯಾದ ಸಿಆರ್‌ಪಿಎಫ್‌ನ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌, ತಾಲ್ಲೂಕಿನ ಮರಗುತ್ತಿಯ ಮಹಾದೇವ ಇಂದ್ರಸೇನ್‌ ಪಾಟೀಲ ಅವರ ಕುಟುಂಬದವರಿಗೆ ರಾಜ್ಯ ಸರ್ಕಾರ ₹25 ಲಕ್ಷ ಪರಿಹಾರ ಘೋಷಿಸಿದೆ.

ಮಹಾದೇವ ಅವರಪಾರ್ಥಿವ ಶರೀರದಅಂತ್ಯಕ್ರಿಯೆಯನ್ನು ಮರಗುತ್ತಿ ಗ್ರಾಮದಲ್ಲಿ ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ, ‘ಮಹಾದೇವ ಅವರ ಕುಟುಂಬದವರಿಗೆ ₹25 ಲಕ್ಷ ಪರಿಹಾರ ನೀಡಲಾಗುವುದು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಈ ವಿಷಯವಾಗಿ ಚರ್ಚಿಸಿದ್ದೇನೆ. ಆದಷ್ಟು ಬೇಗ ಪರಿಹಾರದ ಚೆಕ್‌ ನೀಡುತ್ತೇವೆ’ ಎಂದು ಹೇಳಿದರು.

ಮಹಾದೇವ ಅವರ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಕೊಡಿಸುವ ವಿಷಯವಾಗಿಯೂಚರ್ಚೆ ನಡೆಸುವುದಾಗಿ ಅವರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT