ಬಿಜೆಪಿಯಿಂದಲೇ ಸ್ಪರ್ಧೆ: ಜಯಪ್ರಕಾಶ್ ಹೆಗ್ಡೆ

ಶುಕ್ರವಾರ, ಮೇ 24, 2019
29 °C

ಬಿಜೆಪಿಯಿಂದಲೇ ಸ್ಪರ್ಧೆ: ಜಯಪ್ರಕಾಶ್ ಹೆಗ್ಡೆ

Published:
Updated:
Prajavani

ಉಡುಪಿ: ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಸಿಕ್ಕರೆ ಮಾತ್ರ ಸ್ಪರ್ಧೆ ಮಾಡುತ್ತೇನೆ; ಇಲ್ಲವಾದರೆ ಪಕ್ಷಕ್ಕೆ ದುಡಿಯುತ್ತೇನೆ ಎಂದು ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ‘ಪ್ರಜಾವಾಣಿ’ಗೆ ಸ್ಪಷ್ಪಪಡಿಸಿದರು.

ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಯಾರೂ ಸಂಪರ್ಕ ಮಾಡಿಲ್ಲ. ಇವೆಲ್ಲ ಕಲ್ಪಿತ ಸುದ್ದಿಗಳಷ್ಟೆ. ಹಿಂದಿನಿಂದಲೂ ಈ ರೀತಿಯ ಸುದ್ದಿಗಳನ್ನು ಮಾಧ್ಯಮಗಳಲ್ಲಿ ತೇಲಿಬಿಡಲಾಗುತ್ತಿದೆ ಎಂದು ಜಯಪ್ರಕಾಶ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದರು.

ಈ ಬಾರಿ ಬಿಜೆಪಿಯಿಂದ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿರುವುದು ಹೌದು. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಟಿಕೆಟ್‌ ನೀಡುವಂತೆ ಪ್ರಚಾರ ಮಾಡುತ್ತಿದ್ದಾರೆ. ಅಂತಿಮವಾಗಿ ಟಿಕೆಟ್‌ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.

‘ಜಯಪ್ರಕಾಶ ಹೆಗ್ಡೆ ಹಿರಿಯರು, ಹಿಂದೆ ಜೆಡಿಎಸ್‌ ಪಕ್ಷದಲ್ಲಿ ಇದ್ದವರು. ಮರಳಿ ಪಕ್ಷಕ್ಕೆ ಬರುವುದಾದರೆ ಸ್ವಾಗತ, ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು’ ಎಂದು ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಯೋಗೀಶ್ ಶೆಟ್ಟಿ ಪ್ರತಿಕ್ರಿಯಿಸಿದರು.

ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಪ್ರಬಲವಾಗಿದೆ. ಕರಾವಳಿಯಲ್ಲಿ ಬಲಗೊಳ್ಳುತ್ತಿದೆ. ಕುಮಾರಸ್ವಾಮಿ ಅವರ ಜನಪರ ಕೆಲಸಗಳನ್ನು ಮತದಾರರು ಮೆಚ್ಚಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಉಡುಪಿ–ಚಿಕ್ಕಮಗಳೂರು ಕ್ಷೇತ್ರ ಸಿಗುವ ಸಾಧ್ಯತೆಗಳಿವೆ. ಸಿಗದಿದ್ದರೂ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇವೆ ಎಂದರು.

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !