ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇನೆ ಕಾರ್ಯಾಚರಣೆ ಸಂಭ್ರಮಿಸಬಾರದು ಹೇಳಿಕೆಗೆ ಆಕ್ಷೇಪ: ಸಿಎಂ ವಿರುದ್ಧ ದೂರ

Last Updated 3 ಮಾರ್ಚ್ 2019, 3:53 IST
ಅಕ್ಷರ ಗಾತ್ರ

ತುಮಕೂರು: ‘ಪಾಕಿಸ್ತಾನದಲ್ಲಿನ ಭಯೋತ್ಪಾದಕರ ಅಡಗುತಾಣಗಳನ್ನು ವಾಯು ದಾಳಿ ಮೂಲಕ ಧ್ವಂಸ ಮಾಡಿದ ಕಾರ್ಯಾಚರಣೆಯನ್ನು ಸಂಭ್ರಮಿಸಬಾರದು ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ದೇಶಪ್ರೇಮಕ್ಕೆ ಧಕ್ಕೆ ತರುವಂಥದ್ದಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಬಂಧಿಸಬೇಕು’ ಎಂದು ಅತುಲ್‌ಕುಮಾರ್ ಸಬರವಾಲ್ (ಮಧುಗಿರಿ ಮೋದಿ) ಮಧುಗಿರಿ ತಾಲ್ಲೂಕು ಬಡವನಹಳ್ಳಿ ಪೊಲೀಸ್ ಠಾಣೆಗೆ ಶನಿವಾರ ದೂರು ಸಲ್ಲಿಸಿದ್ದಾರೆ.

‘ಮುಖ್ಯಮಂತ್ರಿ ಹೇಳಿಕೆ ದೇಶಭಕ್ತರಾದ ತಮಗೆ ನೋವು ತಂದಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಲು ಮುಖ್ಯಮಂತ್ರಿಗಳೇ ಪ್ರೇರಣೆ ನೀಡುತಿರುವುದರಿಂದ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ ತಕ್ಷಣ ಬಂಧನ ಮಾಡಬೇಕು’ ಎಂದು ದೂರಿನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT