ಮಂಗಳವಾರ, ಜೂಲೈ 7, 2020
27 °C

ಮಹಿಳೆ ವಿರುದ್ಧ ಅವಾಚ್ಯ ಪದ ಬಳಕೆ: ಸಚಿವ ಮಾಧುಸ್ವಾಮಿ ವಿರುದ್ಧ ಡಿಜಿಪಿಗೆ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೈತ ಮಹಿಳೆಯ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದ ಪ್ರಕರಣದಲ್ಲಿ ಸಚಿವ ಮಾಧುಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ದೂರು ಸಲ್ಲಿಸಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರ ನಿಯೋಗ ಈ ದೂರು ನೀಡಿದೆ. ಡಿಜಿಪಿ ಕಚೇರಿ ಅಧಿಕಾರಿಗಳು ದೂರು ಸ್ವೀಕರಿಸಿದ್ದಾರೆ.

'ಅಧಿಕಾರದ ದರ್ಪದಲ್ಲಿ ಸಚಿವರು ಮಹಿಳೆಯನ್ನು ನಿಂದಿಸಿದ್ದಾರೆ. ಅವರ ವಿರುದ್ಧ ದೂರು ದಾಖಲಿಸಿಕೊಳ್ಳಬೇಕು' ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ನನ್ನನ್ನೇನು ಮಂತ್ರಿ ಮಾಡಿಲ್ಲ, ನನಗೂ ಸ್ವಾಭಿಮಾನ ಇದೆ: ಮಾಧುಸ್ವಾಮಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು