ಶಿವಕುಮಾರ ಸ್ವಾಮೀಜಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲೂ ಗೌರವ

7
ವಾಟ್ಸ್‌ಆ್ಯಪ್ ಸ್ಟೇಟಸ್, ಡಿಪಿಗಳಲ್ಲಿ ಶ್ರೀಗಳದ್ದೇ ಚಿತ್ರ

ಶಿವಕುಮಾರ ಸ್ವಾಮೀಜಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲೂ ಗೌರವ

Published:
Updated:

ಬೆಂಗಳೂರು: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಇನ್ನಿಲ್ಲವೆಂಬುದನ್ನು ಅರಗಿಸಿಕೊಳ್ಳಲಾಗದೆ ಭಕ್ತ ಸಮೂಹ ಕಂಬನಿ ಮಿಡಿಯುತ್ತಿದೆ. ರಾಜಕೀಯ ನಾಯಕರು, ವಿವಿಧ ಕ್ಷೇತ್ರಗಳ ಗಣ್ಯರು ಟ್ವಿಟರ್, ಫೇಸ್‌ಬುಕ್ ಇತರ ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಗಳ ಅಗಲುವಿಕೆಗೆ ಸಂತಾಪ ಸೂಚಿಸಿದ್ದಾರೆ. ಭಕ್ತರೂ ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಗಳಿಗೆ ಗೌರ ಸಲ್ಲಿಸುತ್ತಿದ್ದಾರೆ.

ನೂರಾರು ಭಕ್ತರು ವಾಟ್ಸ್‌ಆ್ಯಪ್ ಸ್ಟೇಟಸ್, ಡಿಪಿಯಲ್ಲಿ ಶ್ರೀಗಳ ಚಿತ್ರವನ್ನು ಪ್ರಕಟಿಸುವ ಮೂಲಕ ಸಂತಾಪ ಸೂಚಿಸಿದ್ದಾರೆ. ಅನೇಕ ಮಂದಿ ತಮ್ಮ ಫೇಸ್‌ಬುಕ್‌ ಟೈಮ್‌ಲೈನ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಟ್ವಿಟರ್‌ನಲ್ಲಿ #ShivakumaraSwamiji ಮತ್ತು #SiddagangaMutt ಹ್ಯಾಷ್‌ಟ್ಯಾಗ್‌ಗಳು ಟ್ರೆಂಡಿಂಗ್ ಆಗಿವೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ನೂರಾರು ಗಣ್ಯರು ಟ್ವಿಟರ್ ಮೂಲಕ ಸ್ವಾಮೀಜಿಗಳಿಗೆ ಶ್ರದ್ದಾಂಜಲಿ ಸಮರ್ಪಿಸಿದ್ದಾರೆ.

ಇದನ್ನೂ ಓದಿ: ಶಿವಕುಮಾರ ಸ್ವಾಮೀಜಿ ಅಗಲಿಕೆಗೆ ಗಣ್ಯರ ಸಂತಾಪ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !