ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡದ ಸಂಸ್ಕೃತಿಯ ಕಂಪನ್ನು ಜಗತ್ತಿಗೆ ಪಸರಿಸಿದವರು ಕಾರ್ನಾಡ: ಸಿಎಂ ಎಚ್ಡಿಕೆ 

Last Updated 10 ಜೂನ್ 2019, 5:03 IST
ಅಕ್ಷರ ಗಾತ್ರ

ಬೆಂಗಳೂರು: ಸಾಹಿತಿ, ರಂಗಕರ್ಮಿ, ನಟ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರೂ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡದ ಸಂಸ್ಕೃತಿಯ ಕಂಪನ್ನು ವಿಶ್ವಕ್ಕೆ ಪರಿಚಯಿಸಿದವರು ಗಿರೀಶ ಕಾರ್ನಾಡ ಎಂದು ಸಿಎಂ ಎಚ್‌ಡಿಕೆ ಅಭಿಪ್ರಾಯಪಟ್ಟಿದ್ದಾರೆ.

‘ಇತಿಹಾಸವನ್ನು ಆಧರಿಸಿ ಬರೆದ ನಾಟಕಗಳು ಇಂದಿನ ವಸ್ತುಸ್ಥಿತಿಯನ್ನು ವಿಶ್ಲೇಷಿಸುವ ರೀತಿ ಅಪೂರ್ವವಾದುದು. ಅವರ ನಾಟಕಗಳು ದೇಶ- ವಿದೇಶದ ಹಲವು ಭಾಷೆಗಳಿಗೆ ಅನುವಾದಗೊಂಡು ಪ್ರದರ್ಶನಗೊಂಡವು. ಆ ಮೂಲಕ ಕನ್ನಡ ಸಂಸ್ಕೃತಿಯ ಕಂಪನ್ನು ಜಗತ್ತಿನ ಉದ್ದಗಲಕ್ಕೂ ಪಸರಿಸಿದ ಕೀರ್ತಿ ಅವರದು,’ ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

‘ಚಲನಚಿತ್ರರಂಗದಲ್ಲಿ ನಟನೆ ಹಾಗೂ ನಿರ್ದೇಶನದಲ್ಲಿ ತಮ್ಮದೇ ಛಾಪು ಮೂಡಿಸಿದರು. ನಾಡಿನ ಸಾಂಸ್ಕೃತಿಕ ವಲಯಕ್ಕೆ ಹೊಸ ಹೊಳಪು ನೀಡಿದ ಅಗಾಧ ಪ್ರತಿಭೆಯನ್ನು ನಾವು ಇಂದು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ,’ ಎಂದು ಮುಖ್ಯಮಂತ್ರಿಗಳು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕಾರ್ನಾಡ ನಿಧನಕ್ಕೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ, ಸಿದ್ದರಾಮಯ್ಯ, ಯಡಿಯೂರಪ್ಪ ಅವರೂ ಟ್ವೀಟ್‌ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

‘ಗಿರೀಶಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು. ಅವರ ಸಾವಿನ ಶೋಕದಲ್ಲಿ‌ ನಾನು ಭಾಗಿಯಾಗಿದ್ದೇನೆ,’ ಎಂದು ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT