ಸೋಮವಾರ, ಜೂನ್ 1, 2020
27 °C

ರಾಜ್ಯದಲ್ಲಿ ಈವರೆಗೆ 98 ಕೊರೊನಾ ಪ್ರಕರಣ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಇಂದು (ಮಾರ್ಚ್ 31) ಮುಂಜಾನೆ 8 ಗಂಟೆಯವರೆಗೆ ಒಟ್ಟು 98 ಕೊರೊನಾ ವೈರಸ್ ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಪ್ರಕರಣ 89: ಹೊಸಪೇಟೆ-ಬಳ್ಳಾರಿಯ 52 ವರ್ಷದ ಪುರುಷ. ಮಾರ್ಚ್ 16ರಂದು ಬೆಂಗಳೂರಿಗೆ ಪ್ರಯಾಣಿಸಿದ್ದರು. ಬಳ್ಳಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 90: ಹೊಸಪೇಟೆ-ಬಳ್ಳಾರಿಯ 48 ವರ್ಷದ ಮಹಿಳೆ. ಮಾರ್ಚ್ 16ರಂದು ಬೆಂಗಳೂರಿಗೆ ಪ್ರಯಾಣಿಸಿದ್ದರು. ಬಳ್ಳಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 91: ಹೊಸಪೇಟೆ-ಬಳ್ಳಾರಿಯ 26 ವರ್ಷದ ಮಹಿಳೆ. ಮಾರ್ಚ್ 16ರಂದು ಬೆಂಗಳೂರಿಗೆ ಪ್ರಯಾಣಿಸಿದ್ದರು. ಬಳ್ಳಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 92: ಬೆಂಗಳೂರಿನ 40 ವರ್ಷದ ಪುರುಷ. ಪ್ರಕರಣ 59ರ ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿ. ಬೆಂಗಳೂರು ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 93: ಬೆಂಗಳೂರಿನ 19 ವರ್ಷದ ಪುರುಷ. ಅಮೆರಿಕದ ನ್ಯೂಯಾರ್ಕ್‌ ನಗರದಿಂದ ಮಾರ್ಚ್‌ 22ರಂದು ಭಾರತಕ್ಕೆ ಹಿಂದಿರುಗಿದ್ದರು.

ಪ್ರಕರಣ 94: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ 40 ವರ್ಷದ ಮಹಿಳೆ. ಚಿಕ್ಕಬಳ್ಳಾಪುರದ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿದೆ.

ಪ್ರಕರಣ 95: ಮೈಸೂರು ಜಿಲ್ಲೆಯ 35 ವರ್ಷದ ಪುರುಷ. 52ನೇ ಪ್ರಕರಣದ ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿ. ಮೈಸೂರು ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 96: ಮೈಸೂರು ಜಿಲ್ಲೆಯ 41 ವರ್ಷದ ಪುರುಷ. ಮೈಸೂರು ಜಿಲ್ಲೆಯ ನಿಗದಿತ ಅಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಪ್ರಕರಣ 97: ದಕ್ಷಿಣ ಕನ್ನಡ ಜಿಲ್ಲೆಯ 34 ವರ್ಷದ ಪುರುಷ. ದುಬೈನಿಂದ ಮಾರ್ಚ್ 18ರಂದು ಭಾರತಕ್ಕೆ ಹಿಂದಿರುಗಿದ್ದರು. 

ಪ್ರಕರಣ 98: ಉತ್ತರ ಕನ್ನಡ ಜಿಲ್ಲೆ ಭಟ್ಕಳದ 26 ವರ್ಷದ ಪುರುಷ. ದುಬೈನಿಂದ ಮಾರ್ಚ್ 20ರಂದು ಭಾರತಕ್ಕೆ ಹಿಂದಿರುಗಿದ್ದರು. 

ಹೊಸ ಸಂಖ್ಯೆ

ಕೋವಿಡ್-19ಕ್ಕೆ ಸಂಬಂಧಿಸಿದ ಎಲ್ಲ ರೀತಿಯ ಅನುಮಾನಗಳಿಗೆ ಸಹಾಯವಾಣಿ ಸಂಖ್ಯೆ 104ರ ಜೊತೆಗೆ, 97456 97456 ಸಂಖ್ಯೆಯನ್ನೂ ಸಂಪರ್ಕಿಸಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು