ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೆ ನಾಲ್ವರು ಶಾಸಕರು ಗೈರು

7

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೆ ನಾಲ್ವರು ಶಾಸಕರು ಗೈರು

Published:
Updated:

ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು ನಾಲ್ವರು ಶಾಸಕರು ಸಭೆಗೆ ಗೈರಾಗಿದ್ದಾರೆ. 

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಗೋಕಾಕ್ ಕ್ಷೇತ್ರದ ರಮೇಶ್‌ ಜಾರಕಿಹೋಳಿ, ಚಿಂಚೋಳಿ ಕ್ಷೇತ್ರದ ಉಮೇಶ್‌ ಜಾದಾವ್‌,  ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಬಿ.ನಾಗೇಂದ್ರ ಹಾಗೂ ಅಥಣಿ ಕ್ಷೇತ್ರದ ಶಾಸಕ  ಮಹೇಶ್‌ ಕಮಟಳ್ಳಿ ಸಭೆಗೆ ಗೈರಾಗಿದ್ದಾರೆ.

ಸಭೆಯನ್ನು ಮಧ್ಯಾಹ್ನ 3.30ಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಶಾಸಕರು ತಡವಾಗಿ ಆಗಮಿಸಿದ ಕಾರಣ 5 ಗಂಟೆ ಸುಮಾರಿಗೆ ಸಭೆ ಆರಂಭ ಮಾಡಲಾಯಿತು. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಪರಮೇಶ್ವರ್‌ ಹಾಗೂ ರಾಜ್ಯದ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಧ್ಯಕ್ಷ ಈಶ್ವರ್‌ ಖಂಡ್ರೆ ಅವರು ಸಭೆಯಲ್ಲಿ ಭಾಗಿಯಾಗಿದ್ದಾರೆ. 

ಬರಹ ಇಷ್ಟವಾಯಿತೆ?

 • 16

  Happy
 • 2

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !