ಸೋಮವಾರ, ಸೆಪ್ಟೆಂಬರ್ 16, 2019
22 °C

‘ಬಂಡಾಯ ಶಮನ, ಕಾಂಗ್ರೆಸ ಅಭ್ಯರ್ಥಿ ಗೆಲುವು ಖಚಿತ’

Published:
Updated:

ಕುಂದಗೋಳ: ನಾಮಪತ್ರ ಹಿಂದಕ್ಕೆ ಪಡೆದಿರುವ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳು ಪಕ್ಷದ ಅಧಿಕೃತ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರನ್ನು ಬೆಂಬಲಿಸುತ್ತಾರೆ ಎಂದು ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲ ಕುಮಾರ ಪಾಟೀಲ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠೆಯ ಕಣವಾಗಿರುವ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದಲ್ಲಿ ಯಾವದೇ ಗೊಂದಲಗಳಿಲ್ಲ. ನಾಮ ಪತ್ರ ಸಲ್ಲಿಸುವ ದಿನ ಸೇರಿದ್ದ ಜನಸಾಗರವೇ ಕಾಂಗ್ರೆಸ್ ಗೆಲುವಿಗೆ ದಿಕ್ಕಸೂಚಿ. ಮೇ 3ರಂದು ಸಂಜೆ 4 ಕ್ಕೆ ತಾಲ್ಲೂಕಿನ ಸಂಶಿ ಗ್ರಾಮದ ಎಸ್.ಜೆ.ಎಫ್.ಎಸ್. ಹೈಸ್ಕೂ‌ಲ್ ಮೈದಾನದಲ್ಲಿ ಬೃಹತ್ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಿ.ಕೆ. ಶಿವಕುಮಾರ, ಆರ್.ವಿ. ದೇಶಪಾಂಡೆ, ಎಚ್.ಕೆ. ಪಾಟೀಲ, ಸತೀಶ ಜಾರಕಿಹೊಳಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ದಿನೇಶ ಗುಂಡೂರಾವ್, ಜೆಡಿಎಸ್ ಮುಖಂಡರಾದ ಬಸವರಾಜ ಹೊರಟ್ಟಿ, ಎನ್.ಎಚ್. ಕೋನರಡ್ಡಿ, ಎಂ.ಎಸ್. ಅಕ್ಕಿ ಬಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅರವಿಂದ ಕಟಗಿ, ಜಗದೀಶ ಉಪ್ಪಿನ, ಸುರೇಶ ಗಂಗಾಯಿ, ಪ್ರಕಾಶಗೌಡ ಪಾಟೀಲ, ವೆಂಕನಗೌಡ ಪಾಟೀಲ, ರಾಹೇಸಾಬ್ ಕಳ್ಳಿಮನಿ, ಸಿದ್ದಪ್ಪ ಚೂರಿ, ಮಂಜುನಾಥ ಯಂಟ್ರಾವಿ ಇದ್ದರು.

Post Comments (+)