ಬುಧವಾರ, ಜೂಲೈ 8, 2020
21 °C
ಜಿ.ಪಂ. ಅಧ್ಯಕ್ಷೆಯಾಗಿ ಸುಜಾತಾ ಆಯ್ಕೆ

ವಿಜಯಪುರದಲ್ಲಿ ಬಸ್‌ಗೆ ಕಲ್ಲು: ಲಘು ಲಾಠಿ ಪ್ರಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿದ್ದ ವಿಜಯಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆ ಸಂದರ್ಭದಲ್ಲಿ ಕಲ್ಲು ತೂರಾಟ, ಲಘು ಲಾಠಿ ಪ್ರಹಾರ ನಡೆಯಿತು.

ಕಾಂಗ್ರೆಸ್‌ ಜೊತೆ ಕೈಜೋಡಿಸಿದ್ದ ಬಿಜೆಪಿ ಸದಸ್ಯರು ಖಾಸಗಿ ಬಸ್‌ನಲ್ಲಿ ಜಿಲ್ಲಾ ಪಂಚಾಯಿತಿ ಆವರಣಕ್ಕೆ ಬರುವ ವೇಳೆ ಬಿಜೆಪಿ ಕಾರ್ಯಕರ್ತರು ಕಲ್ಲುತೂರಿದ್ದರಿಂದ ಬಸ್ಸಿ‌ನ ಕಿಟಕಿ ಪುಡಿಯಾದವು. ಕಾಂಗ್ರೆಸ್‌ ಮತ್ತು ಬಿಜೆಪಿ ಮುಖಂಡರ ನಡುವೆ ಬಿರುಸಿನ ವಾಗ್ವಾದ ನಡೆಯಿತು. ಈ ಸಂದರ್ಭದಲ್ಲಿ ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಉದ್ರಿಕ್ತರು ತೂರಿದ ಕಲ್ಲಿನಿಂದ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರು ಗಾಯಗೊಂಡರು.

ಸುಜಾತಾ ಅಧ್ಯಕ್ಷೆ: 42 ಸದಸ್ಯರ ಜಿಲ್ಲಾ ಪಂಚಾಯಿತಿಯಲ್ಲಿ ಯಾವೊಂದು ಪಕ್ಷಕ್ಕೂ ಸ್ಪಷ್ಟ ಬಹುಮತವಿರಲಿಲ್ಲ. ಅಧ್ಯಕ್ಷ ಸ್ಥಾನಕ್ಕೆ ನಡೆದ  ಚುನಾವಣೆಯಲ್ಲಿ ಸಾರವಾಡ ಕ್ಷೇತ್ರದ ಕಾಂಗ್ರೆಸ್‌ ಸದಸ್ಯೆ ಸುಜಾತಾ ಕಳ್ಳಿಮನಿ ಆಯ್ಕೆಯಾದರು.

ಚುನಾವಣೆಯಲ್ಲಿ ಬಿಜೆಪಿಯ 20 ಸದಸ್ಯರ ಪೈಕಿ ನಾಲ್ವರು ಕಾಂಗ್ರೆಸ್‌ ಪರ, ಕಾಂಗ್ರೆಸ್‌ನ 18 ಸದಸ್ಯರ ಪೈಕಿ ಮೂವರು ಬಿಜೆಪಿ ಪರ, ಜೆಡಿಎಸ್‌ನ ಮೂವರು ಸದಸ್ಯರ ಪೈಕಿ ಇಬ್ಬರು ಕಾಂಗ್ರೆಸ್‌ ಪರ ಹಾಗೂ ಒಬ್ಬರು ಬಿಜೆಪಿ ಪರ ಮತ್ತು ಪಕ್ಷೇತರ ಸದಸ್ಯರೊಬ್ಬರು ಕಾಂಗ್ರೆಸ್‌ ಪರ ಮತ ಚಲಾಯಿಸಿದ್ದು ವಿಶೇಷವಾಗಿತ್ತು.

ಸುಜಾತಾ ಪರವಾಗಿ 22 ಮತಗಳು ಹಾಗೂ ಪರಾಜಿತ ಬಿಜೆಪಿ ಅಭ್ಯರ್ಥಿ ಭೀಮಾಶಂಕರ ಬಿರಾದಾರ ಪರವಾಗಿ 20 ಮತಗಳು ಚಲಾವಣೆಯಾದವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು