ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಂಕು ಸ್ಥಾಪನೆ ಆಹ್ವಾನ ಪತ್ರಿಕೆಯಲ್ಲಿ ಕಾಂಗ್ರೆಸ್ ಶಾಸಕರ ಕಡೆಗಣನೆ: ಪ್ರತಿಭಟನೆ

Last Updated 10 ಫೆಬ್ರುವರಿ 2019, 12:15 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಭಾನುವಾರಸಂಜೆ ನಡೆಯಲಿರುವ ಐಐಟಿಕಟ್ಟಡ ಶಂಕು ಸ್ಥಾಪನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕ ಕಾಂಗ್ರೆಸ್‌ನ ಪ್ರಸಾದ್ ಅಬ್ಬಯ್ಯ ಅವರ ಹೆಸರನ್ನು ಕೈಬಿಟ್ಟಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಆಪರೇಷನ್ ಕಮಲ ಹೆಸರಿನಲ್ಲಿ ಕೆಟ್ಟ ರಾಜಕೀಯ ನಡೆಸುತ್ತಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಮತ್ತು ಕೂಡಲೇ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಒತ್ತಾಯಿಸಿದರು.

ನಗರದಲ್ಲಿ ಪ್ರಧಾನಿ‌‌ ನರೇಂದ್ರ ಮೋದಿ ಅವರ ಕಾರ್ಯಕ್ರಮ ಇರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕ ಪ್ರಸಾದ ಅಬ್ಬಯ್ಯ, ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ಮಹಾನಗರ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕರ್ನಾಟಕ ಕಿಸಾನ್ ಕಾಂಗ್ರೆಸ್ ಪ್ರತಿಭಟನೆ

ಹುಬ್ಬಳ್ಳಿ: ಕೇಂದ್ರ ಸರ್ಕಾರ ರೈತ ವಿರೋಧಿ ‌ನೀತಿ ಅನುಸರಿಸುತ್ತಿದೆ, ಕಳಸಾ ಬಂಡೂರಿ ಯೋಜನೆ ಜಾರಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT