ಅತೃಪ್ತ ನಾಲ್ಕು ಶಾಸಕರ ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷರಿಗೆ‌ ಕಾಂಗ್ರೆಸ್ ದೂರು

7

ಅತೃಪ್ತ ನಾಲ್ಕು ಶಾಸಕರ ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷರಿಗೆ‌ ಕಾಂಗ್ರೆಸ್ ದೂರು

Published:
Updated:

ಬೆಂಗಳೂರು: ಅತೃಪ್ತ ನಾಲ್ವರು ಶಾಸಕರನ್ನು ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರಿಗೆ‌ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ‌, ಉಪಮುಖ್ಯಮಂತ್ರಿ ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೂರು ಸಲ್ಲಿಸಿದರು.

ಕಾಂಗ್ರೆಸ್‌ನ ಶಾಸಕರಾದ ರಮೇಶ ಜಾರಕಿಹೊಳಿ, ಮಹೇಶ ಕುಮಠಳ್ಳಿ, ಉಮೇಶ ಜಾಧವ, ಬಿ.ನಾಗೇಂದ್ರ ಈ ನಾಲ್ವರ ವಿರುದ್ಧ ದೂರು ನೀಡಲಾಗಿದೆ.

ಸೋಮವಾರ ವಿಧಾನಸಭೆ ಕಲಾಪದ ಮಧ್ಯಾಹ್ನದ ಊಟದ ವಿರಾಮದ ವೇಳೆ ಸಭಾಧ್ಯಕ್ಷರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರು ದೂರು ಸಲ್ಲಿಸಿದರು.

ವಿಪ್‌ ಮತ್ತು ನೋಟಿಸ್‌ ಎಲ್ಲವನ್ನೂ ಸೇರಿಸಿದ ವಿವರವಾದ ಮಾಹಿತಿಯುಳ್ಳ 82 ಪುಟಗಳ ವರದಿಯನ್ನ ಸಲ್ಲಿಸಿದ್ದಾರೆ.

ಎಲ್ಲ ಶಾಸಕರಿಗೂ ಸದನದಲ್ಲಿ ಪಾಲ್ಗೊಳ್ಳುವಂತೆ ವ್ಹಿಪ್ ಜಾರಿ ಮಾಡಲಾಗಿತ್ತು. ಅಧಿವೇಶನ ಮುಗಿಯುವರೆಗೂ ಬರುವುದಿಲ್ಲ ಎಂದು ನಾಲ್ವರು ಪತ್ರದಲ್ಲಿ ತಿಳಿಸಿದ್ದಾರೆ. ನಾಲ್ವರು ಅತೃಪ್ತರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಕ್ರಮ ಜರುಗಿಸುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇವೆ. ಇದು ಶಾಸಕಾಂಗ ಪಕ್ಷದ ಸಭೆಯಲ್ಲಿ ಅವಿರೋಧವಾಗಿ ಕೈಗೊಂಡ ನಿರ್ಣಯ. ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಸಭಾಧ್ಯಕ್ಷರಿಗೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದುಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಎರಡು ದಿನಗಳ ಹಿಂದೆ ತಿಳಿಸಿದ್ದರು. 

* ಇವನ್ನೂ ಓದಿ...

‘ಆಡಿಯೊ’ ಕುರಿತು ಎಸ್‌ಐಟಿ ತನಿಖೆ ಬಿಜೆಪಿ ಆಕ್ಷೇಪ ​

ಅಡಳಿತ ಪಕ್ಷದ ಸದಸ್ಯರ ಧರಣಿ: ವಿಧಾನಪರಿಷತ್‌ನಲ್ಲಿ ಬಿಜೆಪಿ ಸಭಾತ್ಯಾಗ

ಎಲ್ಲದರ ರುವಾರಿ ಸಿಎಂ ಆದ್ದರಿಂದ ಎಸ್‌ಐಟಿಯ ಹೊರಗೆ ತನಿಖೆಯಾಗಲಿ: ಮಾಧುಸ್ವಾಮಿ​

ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೊದಲ್ಲಿ ಏನಿದೆ?

ಯಡಿಯೂರಪ್ಪಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಬುದ್ಧಿ ಕೊಟ್ಟಿರಬಹುದು: ಎಚ್‌ಡಿಕೆ

ಯಡಿಯೂರಪ್ಪನವರ ಆತ್ಮಸಾಕ್ಷಿಗೆ ಧನ್ಯವಾದ: ಡಿ.ಕೆ.ಶಿವಕುಮಾರ್‌

ಸಿಎಂ ಕುಮಾರಸ್ವಾಮಿ ಮಾಧ್ಯಮಗೋಷ್ಠಿ; ಬಿಜೆಪಿಯಿಂದ ಶಾಸಕರಿಗೆ ಗಾಳ, ಆಡಿಯೊ ಬಿಡುಗಡೆ

ನಕಲಿ ಆಡಿಯೊ ಕೇಳಿಸಿ ಕಥೆ ಹೇಳ್ತಿದ್ದೀರಿ: ಸಿಎಂಗೆ ಯಡಿಯೂರಪ್ಪ ತಿರುಗೇಟು

ಬರಹ ಇಷ್ಟವಾಯಿತೆ?

 • 16

  Happy
 • 2

  Amused
 • 0

  Sad
 • 3

  Frustrated
 • 0

  Angry

Comments:

0 comments

Write the first review for this !