ಶುಕ್ರವಾರ, ಜುಲೈ 30, 2021
27 °C

ದಿನಕ್ಕೊಂದು ಆದೇಶ, ಜನರಿಗೆ ಸಂಕಟ: ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸಬೇಕಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಪರಸ್ಪರ ಮೇಲಾಟ ನಡೆಸುತ್ತಿರುವುದನ್ನು ಕಾಂಗ್ರೆಸ್ ಕಟುವಾಗಿ ಖಂಡಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, 'ಎರಡೂ ಇಲಾಖೆಗಳು ದಿನಕ್ಕೊಂದು ಆದೇಶ, ಘಳಿಗೆಗೆ ಒಂದು ಸತ್ತೋಲೆ, ಕ್ಷಣಕ್ಕೊಂದು ನಿರ್ಧಾರ ತೆಗೆದುಕೊಂಡು ನಿರ್ವಹಣೆಯಲ್ಲಿ ವಿಫಲವಾಗಿದೆ. ಇಲಾಖೆಗಳ ಸಮನ್ವಯದ ಕೊರತೆಯಿಂದ ಜನ ರಸ್ತೆಯಲ್ಲೇ ಪರದಾಡುವಂತಾಗಿದೆ' ಎಂದು ಟೀಕಿಸಿದ್ದಾರೆ.

'ಕನಿಷ್ಠ ಕೋವಿಡ್ ಸಮಸ್ಯೆ ಮುಗಿಯುವವರೆಗಾದರೂ ಎರಡೂ ಇಲಾಖೆಯನ್ನ ವಿಲೀನಗೊಳಿಸಿ ಒಂದೇ ವ್ಯವಸ್ಥೆಯ ನೇತೃತ್ವದ ಅಡಿಯಲ್ಲಿ ಆಡಳಿತ ನೀಡುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಒತ್ತಾಯಿಸುತ್ತೇನೆ' ಎಂದು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು