ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರೋಧ ಪಕ್ಷ, ಕೆಪಿಸಿಸಿ ಅಧ್ಯಕ್ಷ ನೇಮಕ: ವಾರಾಂತ್ಯಕ್ಕೆ ಕಾಂಗ್ರೆಸ್ ನಿರ್ಧಾರ?

Last Updated 12 ಫೆಬ್ರುವರಿ 2020, 19:43 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷರ ನೇಮಕ ಸಂಬಂಧ ಈ ವಾರದ ಅಂತ್ಯಕ್ಕೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ. ಶುಕ್ರವಾರ ಅಥವಾ ಶನಿವಾರ ನೇಮಕಾತಿ ಆದೇಶ ಹೊರ ಬೀಳಲಿದೆ ಎಂದು ಹೇಳಲಾಗುತ್ತಿದೆ.

ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ್ದು, ಈ ಬಗ್ಗೆ ಪಕ್ಷದ ವರಿಷ್ಠರು ಯಾವುದೇ ನಿರ್ಧಾರ ಕೈಗೊಂಡಿಲ್ಲ. ವಿಧಾನ ಮಂಡಲಅಧಿವೇಶನ ಫೆ. 17ರಿಂದ ಆರಂಭವಾಗಲಿದ್ದು, ಅಷ್ಟರಲ್ಲಿ ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡಬೇಕಾಗಿದೆ. ಹಾಗಾಗಿ ಈ ವಾರವೇ ಒಂದು ನಿರ್ಧಾರಕ್ಕೆ ಬರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT