ಸೋಮವಾರ, ಜೂನ್ 14, 2021
28 °C

ಕಾಂಗ್ರೆಸ್ ಹೀನಾಯ ಸೋಲು | ವರಿಷ್ಠರಿಗೆ ಜಾಡಿಸಿದ ರಾಮಲಿಂಗಾರೆಡ್ಡಿ, ಮುಂದಿನ ನಡೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು’ ಎಂದು ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಮಂಗಳವಾರ ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಅವರ ಆಕ್ರೋಶದ ನುಡಿಗಳು ಇವು...

‘ಹಿರಿಯರು ನೀಡಿದ ಸಲಹೆಗಳನ್ನು ಪರಿಗಣಿಸದೇ ಇರುವುದು, ಕೆಲವು ಸಚಿವರ ಕಾರ್ಯಕ್ಷಮತೆಯೂ ಸಹ ಪಕ್ಷಕ್ಕೆ ಹಿನ್ನಡೆಯಾಗಲು ಪ್ರಮುಖ ಕಾರಣವಾಯಿತು. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಲ್ಲಿ ಪಕ್ಷದ ಕುರಿತು ಏನೂ ಅರಿವಿಲ್ಲದೇ ಬಂದ ಹೊಸಬರಿಗೆ, ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಈ ಪರಿಸ್ಥಿತಿಗೆ ಕಾರಣ. ರಾಜ್ಯದ ಮುಂಚೂಣಿ ನಾಯಕರು ಹಾಗೂ ಉಸ್ತುವಾರಿಗಳು ಪಕ್ಷದ ಆಂತರಿಕ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಎಡವಿದ್ದಾರೆ.

* ಇದನ್ನೂ ಓದಿ: ವೇಣುಗೋಪಾಲ್‌ ಒಬ್ಬ ಬಫೂನ್, ಸಿದ್ದು ಅಹಂಕಾರಿ, ದಿನೇಶ್ ಫ್ಲಾಪ್‌ ಅಧ್ಯಕ್ಷ: ಶಾಸಕ ರೋಷನ್ ಬೇಗ್ ವಾಗ್ದಾಳಿ 

‘ನಮ್ಮ ಸರ್ಕಾರವಿದ್ದೂ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಉತ್ಸಾಹ ಕಳೆದುಕೊಂಡಿದ್ದರು. ಇದಕ್ಕೆ ಪ್ರಮುಖ ಸ್ಥಾನದಲ್ಲಿರುವ ಕೆಲವು ಕಾಂಗ್ರೆಸ್ ಸಚಿವರು ಹಾಗೂ ಕಾಂಗ್ರೆಸ್  ಕಾರ್ಯಕರ್ತರ ಮಧ್ಯೆ ಯಾವುದೇ ಉತ್ತಮ ಭಾಂಧವ್ಯ, ಸಂವಹನ ಇಲ್ಲದಿರುವುದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ನಿರ್ಲಕ್ಷ್ಯ. ಈ ಕುರಿತು ಹಲವು ಕಾರ್ಯಕರ್ತರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

‘ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ  ಸವಾಲಿನ ದಿನಗಳನ್ನು ಎದುರಿಸಲು, ಪಕ್ಷ ಹಾಗೂ ಸರ್ಕಾರದಲ್ಲಿ ಹಿರಿಯರ ಕಡೆಗಣನೆ ಸರಿದೂಗಿಸಬೇಕಾಗಿದೆ. ಸರ್ಕಾರದಲ್ಲಿ ಹಿರಿಯರಿಗೆ ಪ್ರಾತಿನಿಧ್ಯ ನೀಡುವಂತಾಗಲು ಕಾಂಗ್ರೆಸ್ ಪಕ್ಷದ ಹಿರಿಯರೆಲ್ಲರೂ ಒಂದೆಡೆ ಸೇರಿ ಪಕ್ಷದ ಹಿತ ಸಮಾಲೋಚಿಸಬೇಕಾಗಿದೆ. ಜೊತೆಗೆ ಹಿರಿಯರು ಯಾರೂ ಪಕ್ಷ ಬಿಡದಂತೆ ಎಚ್ಚರಿಕೆವಹಿಸಬೇಕಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಹಿರಿಯ ನಾಯಕರು ಪಕ್ಷದಲ್ಲಿ ಮುಂದುವರೆಯುವುದು ಕಷ್ಟ ಸಾಧ್ಯವಾದೀತು.

ಪಕ್ಷದ ಪರ ಚುನಾವಣಾ ಫಲಿತಾಂಶದಲ್ಲಿ ಎಡವಿದ ಸಚಿವರಿಗೆ ಪಕ್ಷ ಸಂಘಟನಾ ಜವಾಬ್ದಾರಿ ನೀಡುವುದರ ಜೊತೆಗೆ ಹಿರಿಯರಿಗೆ ಸರ್ಕಾರದಲ್ಲಿ ಸ್ಥಾನಮಾನ ನೀಡಿ ಪಕ್ಷದ ಆಂತರಿಕ ಅಸಮತೋಲನವನ್ನು ಸರಿಪಡಿಸುವ ಕಾರ್ಯವನ್ನು,  ಜವಾಬ್ದಾರಿ ಹೊತ್ತಿರುವ ಕಾಂಗ್ರೆಸ್ ನಾಯಕರು ಗಮನ ಹರಿಸಬೇಕಾಗಿದೆ’.

* ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಟ್ವಿಟರ್‌ನಲ್ಲಿ ಹಾಡಿ ಹೊಗಳಿದ ಕಾಂಗ್ರೆಸ್‌ನ ರೋಷನ್‌ ಬೇಗ್‌!

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು