ಮಂಗಳವಾರ, ಜನವರಿ 28, 2020
19 °C
ಕ್ರಿಮಿನಲ್ ಕೇಸು ದಾಖಲಿಸುವಂತೆ ಮನವಿ

ವಿವಾದಿತ ಹೇಳಿಕೆ: ಸೋಮಶೇಖರ ರೆಡ್ಡಿ ವಿರುದ್ಧ ಕೇಸ್ ದಾಖಲಿಸಲು ಕಾಂಗ್ರೆಸ್ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಿರ್ದಿಷ್ಟ ಸಮುದಾಯವನ್ನು ಉದ್ದೇಶಿಸಿ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಸೋಮಶೇಖರ ರೆಡ್ಡಿಯ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಶನಿವಾರ ಮನವಿ ಸಲ್ಲಿಸಿತು. ಪೊಲೀಸ್ ಮಹಾ ನಿರ್ದೇಶಕರ ಪರವಾಗಿ ಎಡಿಜಿಪಿ ಡಾ.ಎಂ.ಎ.ಸಲೀಂ ಅವರು ಮನವಿ ಸ್ವೀಕರಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಶುಕ್ರವಾರ ಬಳ್ಳಾರಿಯಲ್ಲಿ ನಡೆದಿದ್ದ ರ್‍ಯಾಲಿ ವೇಳೆ ಮಾತನಾಡಿದ್ದ ಸೋಮಶೇಖರ್ ರೆಡ್ಡಿ, ‘ನಮ್ಮ ದೇಶದಲ್ಲಿ ಇರಬೇಕೆಂದರೆ ನಾವು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯೇ ಆಗುತ್ತೆ. ಹಿಂದೂಗಳನ್ನು ಕೆಣಕಬೇಡಿ’ ಎಂದು ಹೇಳಿದ್ದರು.

ಇದನ್ನೂ ಓದಿ: ನಮ್ಮ ದೇಶದಲ್ಲಿರಬೇಕೆಂದರೆ ನಾವು ಹೇಳಿದಂತೆ ಕೇಳಬೇಕು: ಶಾಸಕ ಸೋಮಶೇಖರ ರೆಡ್ಡಿ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು