ಗುರುವಾರ , ನವೆಂಬರ್ 21, 2019
20 °C

ಕಾಂಗ್ರೆಸ್ ಸರ್ವ ಸದಸ್ಯರ ಸಭೆ

Published:
Updated:

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಪಕ್ಷದ ಸರ್ವ ಸದಸ್ಯರ ಸಭೆಯನ್ನು ಸೆ. 26ರಂದು ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಕರೆದಿದೆ.

ಪಕ್ಷ ಸಂಘಟನೆ, ಇತ್ತೀಚೆಗೆ ಪಕ್ಷದಲ್ಲಿ ಆಗಿರುವ ಬೆಳವಣಿಗೆ, ಉಪಚುನಾವಣೆಗೆ ಸಿದ್ಧತೆ, ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಿಗದಿರುವುದು ಮತ್ತಿತರ ಪ್ರಮುಖ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ.

ಕೆಪಿಸಿಸಿ ಉಸ್ತುವಾರಿಯೂ ಆದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯದ ಹಿರಿಯ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರತಿಕ್ರಿಯಿಸಿ (+)